ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬಿಜೆಪಿ ಸೇರುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತುಮಕೂರು ಜಿಲ್ಲೆಯ ಕುಣಿಗಲ್‌ನ ಎಡಿಯೂರು ಸಿದ್ಧಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎಸ್.ಎಂ.ಕೃಷ್ಣ ಅವರೊಂದಿಗೆ ಮಾಜಿ ಡಿಸಿಎಂ ಆರ್.ಅಶೋಕ್ ಸಂಪರ್ಕದಲ್ಲಿದ್ದಾರೆ. ಯಾವುದೇ ಅನುಮಾನ ಬೇಡ ಕೃಷ್ಣ ಅವರು ಬಿಜೆಪಿ ಪಕ್ಷ ಸೇರುವುದು ಖಚಿತ ಎಂದರು.
ತಮ್ಮ ಹಿರಿತನವನ್ನು ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ ಬೇಸರಕೊಂಡಿದ್ದ ಎಸ್.ಎಂ.ಕೃಷ್ಣ ಅವರು, ಜನೆವರಿ 28ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದರು.
ಪಕ್ಷ ತೊರೆದಿರುವ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರಿಗೆ ರಾಜಕೀಯ ಪಕ್ಷಗಳ ಗಾಳ ಹಾಕುತ್ತಿದ್ದು, ಕೃಷ್ಣ ಅವರು ಯಾವ ಪಕ್ಷ ಸೇರುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ