ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಗೌರವದಿಂದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬಿಜೆಪಿ ಪಕ್ಷ ಸೇರುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ಬಿಜೆಪಿ ಪಕ್ಷ ಸೇರ್ಪಡೆಯಾಗುವ ಕುರಿತು ಈಗಾಗಲೇ ಮಾತುಕತೆ ನಡೆಸಿದ್ದೇನೆ. ಮತ್ತೊಮ್ಮೆ ಅವರನ್ನು ಭೇಟಿಯಾಗಿ ಚರ್ಚಿಸುತ್ತೇನೆ. ಬಿಜೆಪಿ ಸೇರ್ಪಡೆ ಕುರಿತು ಕೃಷ್ಣ ಅವರು ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದರು.
ರಾಜ್ಯ ಬಿಜೆಪಿ ಪಾಳಯದಲ್ಲಿ ಯಾವುದೇ ಗೊಂದಲಗಳಿಲ್ಲ. ನನ್ನ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಡುವೆ ಯಾವುದೇ ವೈಮನಸ್ಸಿಲ್ಲ. ಇಬ್ಬರು ಸೇರಿ ಪಕ್ಷ ಮುನ್ನಡಿಸಿಕೊಂಡು ಹೋಗುತ್ತೇವೆ ಎಂದು ತಿಳಿಸಿದರು.
ತಪ್ಪು ತಿದ್ದಿಕೊಳ್ಳಿ........
ಬ್ರಿಗೇಡ್ ನಾಯಕರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಬಿ.ಎಸ್.ಯಡಿಯೂರಪ್ಪ, ತಮ್ಮ ತಪ್ಪುಗಳನ್ನು ತಿದ್ದುಕೊಂಡರೇ ಅಮಾನತು ಶಿಕ್ಷೆಯನ್ನು ರದ್ದು ಪಡಿಸುವುದಾಗಿ ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ