Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಎಸ್.ಎಂ.ಕೃಷ್ಣ

ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಎಸ್.ಎಂ.ಕೃಷ್ಣ
ಬೆಂಗಳೂರು , ಶುಕ್ರವಾರ, 24 ಮಾರ್ಚ್ 2017 (18:25 IST)
ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಇಂದು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
 
ಕಳೆದ ಎರಡು ದಿನಗಳ ಹಿಂದೆ ಬಿಜೆಪಿಗೆ ಸೇರ್ಪಡೆಯಾದ ಕೃಷ್ಣ ಇಂದು ಮೊದಲ ಬಾರಿಗೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಪ್ರಧಾನಿ ಮೋದಿ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಬೇಡಿಕೆ ಅಥವಾ ಷರತ್ತುಗಳನ್ನಿಟ್ಟು ನಾನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ. ಮಗಳು, ಅಳಿಯನ ಭವಿಷ್ಯಕ್ಕಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
 
ಕಾಂಗ್ರೆಸ್ ಪಕ್ಷದ್ದು ಸೋಗಲಾಡಿತನದ ಜಾತ್ಯಾತೀತತೆ. ಇದೀಗ ಕಾಂಗ್ರೆಸ್ ಪಕ್ಷವನ್ನು ಕಟ್ಟಬೇಕು ಎನ್ನುವ ಮಹತ್ವಕಾಂಕ್ಷೆ ಹೊಂದಿದ ನಾಯಕರು ಯಾರು ಇಲ್ಲ. ಕಾಂಗ್ರೆಸ್ ಪಕ್ಷ ಗೊಂದಲದ ಗೂಡಾಗಿದೆ ಎಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ರಾಜಕೀಯ ಹೋರಾಟ ಇನ್ನೂ ಮುಗಿದಿಲ್ಲ: ದೇವೇಗೌಡ ಗುಡುಗು