Select Your Language

Notifications

webdunia
webdunia
webdunia
webdunia

ಎಸ್.ಎಂ.ಕೃಷ್ಣ ಕಾಂಗ್ರೆಸ್‌ನಲ್ಲಿಯೇ ಮುಂದುವರೆಯಬೇಕು: ಪ್ರಕಾಶ್ ಹುಕ್ಕೇರಿ

ಎಸ್.ಎಂ.ಕೃಷ್ಣ ಕಾಂಗ್ರೆಸ್‌ನಲ್ಲಿಯೇ ಮುಂದುವರೆಯಬೇಕು: ಪ್ರಕಾಶ್ ಹುಕ್ಕೇರಿ
ಬೆಂಗಳೂರು , ಸೋಮವಾರ, 30 ಜನವರಿ 2017 (15:35 IST)
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪ್ರಭಾವಿ ರಾಜಕಾರಣಿ, ಅವರು ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆಯಬೇಕು ಎಂದು ಸಂಸದ ಪ್ರಕಾಶ್ ಹುಕ್ಕೇರಿ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ನಾಳೆ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಚರ್ಚಿಸುತ್ತೇನೆ. ಕೃಷ್ಣ ಅವರು ರಾಜೀನಾಮೆ ಹಿಂಪಡೆಯುಂತೆ ಮನವಿ ಮಾಡಿಕೊಳ್ಳಲು ಕೋರುತ್ತೇನೆ ಎಂದರು.
 
ಒಂದು ವೇಳೆ ಎಸ್.ಎಂ.ಕೃಷ್ಣ ಅವರು ರಾಜೀನಾಮೆ ಹಿಂಪಡೆಯದಿದ್ದರೆ, ಮುಂದೆ ಏನಾಗುತ್ತೆ ಕಾದು ನೋಡೋಣ ಎಂದು ಸಂಸದ ಪ್ರಕಾಶ್ ಹುಕ್ಕೇರಿ ಮಾರ್ಮಿಕವಾಗಿ ನುಡಿದರು.
 
ಸಿಎಂ ಸಿದ್ದರಾಮಯ್ಯ ಹಾಗೂ ಮತ್ತಿತ್ತರ ಮುಖಂಡರ ನಡವಳಿಗೆಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಸಮಧಾನಗೊಂಡಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಅವರು, ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಗೆದ್ದರೆ ಕೈರಾನದಲ್ಲಿ ಕರ್ಫ್ಯೂ: ಬಿಜೆಪಿ ಶಾಸಕನ ಹೊಸ ವಿವಾದ