Select Your Language

Notifications

webdunia
webdunia
webdunia
webdunia

ಎಸ್.ಎಂ.ಕೃಷ್ಣ ಬಿಜೆಪಿ ಸೇರುವುದು ಖಚಿತ: ಯಡಿಯೂರಪ್ಪ

ಎಸ್.ಎಂ.ಕೃಷ್ಣ ಬಿಜೆಪಿ ಸೇರುವುದು ಖಚಿತ: ಯಡಿಯೂರಪ್ಪ
ಬೆಂಗಳೂರು , ಸೋಮವಾರ, 6 ಮಾರ್ಚ್ 2017 (19:28 IST)
ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಿಜೆಪಿ ಸೇರುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ಎಸ್‌ಎಂ,ಕೃಷ್ಣ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮತ್ತು ಸಿಎಂ ಸಿದ್ದರಾಮಯ್ಯರ ಸರಕಾರದ ಬಗ್ಗೆ ಅಸಮಾಧಾನವಿದೆ ಎಂದು ತಿಳಿಸಿದ್ದಾರೆ. ಇಂದು ಬಿಜೆಪಿ ಪಕ್ಷದ ಪರವಾಗಿ ಅಧಿಕೃತ ಆಹ್ವಾನ ನೀಡಲಾಗಿದೆ. ಸಾಧ್ಯವಾದಷ್ಟು ಬೇಗ ಕೃಷ್ಣರವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
 
ಯಡಿಯೂರಪ್ಪ ಅವರೊಂದಿಗೆ ಕೃಷ್ಣ ನಿವಾಸಕ್ಕೆ ತೆರಳಿದ್ದ ಮಾಜಿ ಸಚಿವ ಆರ್.ಅಶೋಕ್ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದವರಲ್ಲಿ ಕೃಷ್ಣ ಕೂಡಾ ಒಬ್ಬರು. ಅವರ ಘನತೆ, ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಕಾಂಗ್ರೆಸ್ ನಡೆದುಕೊಂಡಿಲ್ಲ. ಅವರ ಸೇವೆಗೆ ಅಪಮಾನ ಮಾಡಿದೆ. ಬಿಜೆಪಿಯಲ್ಲಿ ಎಲ್ಲವು ಒಳ್ಳೆಯದಾಗುತ್ತದೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ವಿ.ಕೆ.ಶಶಿಕಲಾರನ್ನು ತುಮಕೂರು ಜೈಲಿಗೆ ವರ್ಗಾಯಿಸಲು ಕೋರಿ ಪಿಐಎಲ್