Publish Date: Tue, 16 Nov 2021 (15:22 IST)
Updated Date: Tue, 16 Nov 2021 (15:25 IST)
ಪುನೀತ್ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಪ್ರವೇಶ ಇಲ್ಲದ ಕಾರಣ ಅಭಿಮಾನಿಗಳಿಗೆ ಪ್ರತ್ಯೇಕವಾದ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ನಿರ್ಮಾಪಕ ಸಾರಾ ಗೋವಿಂದು ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪುನೀತ್ ನಮನ ಕಾರ್ಯಕ್ರಮದಲ್ಲಿ ಅಭಿಮಾನಿಗಳಿಗೆ ಅವಕಾಶ ಇಲ್ಲದೇ ಬೇಸರಗೊಂಡಿರುವ ಅಭಿಮಾನಿಗಳಿಗೆ ಪ್ರತ್ಯೇಕವಾಗಿ ಕಾರ್ಯಕ್ರಮ ಆಯೋಜಿಸುವುದಾಗಿ ತಿಳಿಸಿದರು. ಅವಕಾಶ ಸಿಕ್ಕಿಲ್ಲವೆಂದು ಜನರು ಬೇಸರ ಮಾಡಿಕೊಳ್ಳಬಾರದು. ಅಭಿಮಾನಿಗಳಿಗೆಂದೇ ಮತ್ತೊಂದು ಕಾರ್ಯಕ್ರಮವನ್ನು ಆಯೋಜಿಸುವ ಬಗ್ಗೆ ಚರ್ಚೆಯಾಗುತ್ತಿದೆ. ಬೆಂಗಳೂರು, ಹುಬ್ಬಳ್ಳಿ ಅಥವಾ ದಾವಣಗೆರೆಯಲ್ಲಿ ಮುಂದಿನ ತಿಂಗಳು ಡಾ.ರಾಜ್ ಕುಟುಂಬದ ಅಭಿಮಾನಿಗಳಿಗಾಗಿಯೇ ಪ್ರತ್ಯೇಕ ಕಾರ್ಯಕ್ರಮ ಮಾಡಲಾಗವುದು ಎಂದು ಸಾರಾ ಗೋವಿಂದು ತಿಳಿಸಿದರು.