ಬೀದರ್: ತಮ್ಮ ಆತ್ಮಹತ್ಯೆಗೆ ಶರಣಾಗಿ 8ದಿನಗಲಾದರೂ ಇದುವರೆಗೂ ಯಾರ ವಿರುದ್ಧವೂ ಕ್ರಮ ಜರುಗಿಸಿಲ್ಲ. ಇದೇ ರೀತಿ ವಿಳಂಭವಾದಲ್ಲಿ ಸಾಕ್ಷ್ಯನಾಶವಾಗುವ ಸಾಧ್ಯತೆಯಿದೆ ಎಂದು ಮೃತ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಅವರ ಸಹೋದರಿ ಸುರೇಖಾ ಆತಂಕ ವ್ಯಕ್ತಪಡಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣವನ್ನು ಸಿಐಡಿ, ಸಿಬಿಐ ಸೇರಿದಂತೆ ಯಾವುದಾದರೂ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲಿ. ನಮ್ಮ ತಮ್ಮನ ಸಾವಿಗೆ ನ್ಯಾಯ ಸಿಗಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ ಎಂದರು.
ಈಗಾಗಲೇ ತನಿಖೆಯನ್ನು ವಿಳಂಭ ಮಾಡುತ್ತಿರುವುದು ಬೇಸರ ತಂದಿದೆ. ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆಯಲು ನಿರ್ಧರಿಸಿದ್ದೇವೆ ಎಂದರು.
ನನ್ನ ಸಹೋದರ ಸಾವಿನಲ್ಲಿ ಯಾರೂ ರಾಜಕೀಯ ಮಾಡುವುದು ಬೇಡ. ನನ್ನ ಸಹೋದರ ಮರಣ ಪತ್ರದಲ್ಲಿ ಯಾರ್‍ಯಾರ ಹೆಸರುಗಳನ್ನು ಬರೆದಿದ್ದಾನೋ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ನಿರ್ಲಕ್ಷ್ಯ ತೋರಿದ ಪೊಲೀಸ್ ಮೇಲಧಿಕಾರಿಗಳ ಮೇಲೆಯೂ ಕ್ರಮ ಕೈಗೊಳ್ಳಬೇಕೆಂಬುದು ನಮ್ಮ ಬೇಡಿಕೆ ಎಂದರು.