Select Your Language

Notifications

webdunia
webdunia
webdunia
webdunia

ಸಿಇಟಿ ಪರೀಕ್ಷೆ ವೇಳೆ ಮತ್ತೆ ಜನಿವಾರ ತೆಗೆಸಿದ ಕಾಲೇಜು ಸಿಬ್ಬಂದಿ

Students
ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಸಿಇಟಿ ಪರೀಕ್ಷೆ ವೇಳೆ ಜನಿವಾರ ವಿವಾದವಾಗಿದೆ. ಪರೀಕ್ಷಾ ಪ್ರಾಧಿಕಾರದ ಸ್ಪಷ್ಟ ಸೂಚನೆಯಿದ್ದರೂ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು ವಿವಾದಕ್ಕೆ ಕಾರಣವಾಗಿದ್ದು ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನಲ್ಲಿ ಘಟನೆ ನಡೆದಿದೆ. ಈ ಸಂಬಂಧ ಓರ್ವ ಪುರುಷ ಮತ್ತು ಇಬ್ಬರು ಮಹಿಳಾ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಈ ಸಿಬ್ಬಂದಿಗಳು ಬಲವಂತವಾಗಿ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದಾರೆ ಎನ್ನಲಾಗಿದೆ.

ಸಿಇಟಿ ಪರೀಕ್ಷೆ ವೇಳೆ ವಸ್ತ್ರಸಂಹಿತೆ ಬಗ್ಗೆ ಕೆಇಎ ಸ್ಪಷ್ಟ ನಿರ್ದೇಶನ ನೀಡಿದೆ. ಇದರಲ್ಲಿ ಜನಿವಾರ ತೆಗೆಸಬಾರದು ಎಂಬ ಸ್ಪಷ್ಟ ಸಂದೇಶವಿದೆ. ಹಾಗಿದ್ದರೂ ಕೆಲವು ವಿದ್ಯಾರ್ಥಿಗಳಿಗೆ ಉದ್ದೇಶಪೂರ್ವಕವಾಗಿ ಜನಿವಾರ ತೆಗೆಸಲು ಸೂಚಿಸಲಾಗಿದೆ ಎನ್ನಲಾಗಿದೆ.

ಕಳೆದ ವರ್ಷ ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ದೊಡ್ಡ  ವಿವಾದವಾಗಿತ್ತು. ಇದರಿಂದ ಓರ್ವ ವಿದ್ಯಾರ್ಥಿಗೆ ಪರೀಕ್ಷೆಯೇ ಬರೆಯಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ವರ್ಷ ಇಂತಹ ಕೃತ್ಯವೆಸಗದಂತೆ ಪರೀಕ್ಷಾ ಪ್ರಾಧಿಕಾರ ನಿರ್ದೇಶನ ನೀಡಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ