ನಾಡಿನ ಪ್ರಖ್ಯಾತ ಸ್ವಾಮೀಜಿಯೊಬ್ಬರು ಡೆಡ್ಲಿ ಕೊರೊನಾಕ್ಕೆ ಬಲಿಯಾಗಿದ್ದಾರೆ.
ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದ ಸಂಸ್ಥಾನ ಹಿರೇಮಠದ ಮರಿಸಿದ್ದಲಿಂಗ ಮಹಾಸ್ವಾಮಿಗಳು (44) ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳು ಸೇರಿದಂತೆ ನೆರೆಯ ಆಂಧ್ರ ಪ್ರದೇಶದಲ್ಲಿ ಸಾವಿರಾರು ಭಕ್ತರನ್ನು ಹೊಂದಿರುವ ಶ್ರೀಗಳು, ವೀರಶೈವ ಸಮಾಜ ಮತ್ತು ಪರಂಪರೆಯನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸುತ್ತಿದ್ದರು.