ಸದ್ಗುರು ಭಾರತ ಪ್ರವೇಶ!

Webdunia
ಸೋಮವಾರ, 30 ಮೇ 2022 (13:19 IST)
ಬೆಂಗಳೂರು : ಮಣ್ಣಿನ ಫಲವತ್ತತೆಯನ್ನು ಸಂರಕ್ಷಿಸುವಂತೆ 26 ದೇಶಗಳಲ್ಲಿ ಮಣ್ಣು ಉಳಿಸಿ ಅಭಿಯಾನ ಕೈಗೊಂಡು ಈಶಾ ಪ್ರತಿಷ್ಠಾನದ ಸಂಸ್ಥಾಪಕ ಸದ್ಗುರು ಭಾನುವಾರ ಗುಜರಾತ್ನ ಜಾಮ್ ನಗರದ ಮೂಲಕ ಭಾರತಕ್ಕೆ ವಾಪಸಾಗಿದ್ದಾರೆ.

ಇನ್ನು ಮುಂದಿನ 25 ದಿನಗಳ ಕಾಲ ಭಾರತದ ವಿವಿಧ ಭಾಗಗಳಲ್ಲಿ ಅಭಿಯಾನ ಮುನ್ನಡೆಸಲಿದ್ದಾರೆ. ಭಾರತೀಯ ನೌಕಾಪಡೆಯು ತಮ್ಮ ಸಂಗೀತ ವಾದನದಲ್ಲಿ ಮಣ್ಣು ಉಳಿಸಿ ಅಭಿಯಾನದ ಗೀತೆಯನ್ನು ನುಡಿಸಿ ಸದ್ಗುರು ಅವರನ್ನು ಸ್ವಾಗತಿಸಿದರೆ,

ವಿವಿಧ ರಾಜ್ಯಗಳಿಂದ ಬಂದು ಸೇರಿದ್ದ ಸಾವಿರಾರು ಉತ್ಸಾಹಿಗಳ ಮುಗಿಲು ಮುಟ್ಟುವ ಘೋಷಣೆ, ಮೈನವಿರೇಳಿಸುವ ಡೋಲು ವಾದನ ಮತ್ತು ರೋಮಾಂಚಕ ಜಾನಪದ ಪ್ರದರ್ಶನಗಳ ನಡುವೆ ಸದ್ಗುರು ಭಾರತಕ್ಕೆ ಕಾಲಿಟ್ಟರು.

ಅಭಿಯಾನದ ಭಾಗವಾಗಿ ಸದ್ಗುರು ಅವರು 100 ದಿನಗಳಲ್ಲಿ 30 ಸಾವಿರ ಕಿ.ಮೀ. ಬೈಕ್ ಯಾತ್ರೆ ನಡೆಸುತ್ತಿದ್ದಾರೆ. ಮಾರ್ಚ್ 21 ರಂದು ಲಂಡನ್ನಿಂದ ಆರಂಭವಾದ ಬೈಕ್ ಯಾತ್ರೆ ಯುರೋಪ್, ಮಧ್ಯ ಏಷ್ಯಾದ 27 ರಾಷ್ಟ್ರಗಳಲ್ಲಿ ಸಾಗುತ್ತಿದೆ.

ಇದಕ್ಕೆ ಸಂಬಂಧಿಸಿದಂತೆ ಆ ದೇಶಗಳ ಸರ್ಕಾರಗಳಿಗೆ ನೀತಿಗಳನ್ನು ರೂಪಿಸುವ ಮೂಲಕ ತುರ್ತು ಕ್ರಮ ಕೈಗೊಳ್ಳುವಂತೆ ಸಲಹೆ ನೀಡುತ್ತಿದ್ದಾರೆ.  ಈಗಾಗಲೇ ಹಲವು ದೇಶಗಳ ಮುಖ್ಯಸ್ಥರು, ಜಾಗತಿಕ ನಾಯಕರು, ವಿಜ್ಞಾನಿಗಳು, ಪರಿಸರ ಸಂರಕ್ಷಣಾ ಸಂಸ್ಥೆಗಳು ಹಾಗೂ ವಿಶ್ವಸಂಸ್ಥೆ ಅಂಗ ಸಂಸ್ಥೆಗಳು ಅಭಿಯಾನಕ್ಕೆ ಬೆಂಬಲ ಸೂಚಿಸಿವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ಆಯೋಗದ ಮೇಲೆ ಮಮತಾ ಬ್ಯಾನರ್ಜಿ ಗರಂ

ಬಿಜೆಪಿ ದಾಖಲಿಸಿದ್ದ ಕೇಸ್‌ನಲ್ಲಿ ರಾಹುಲ್‌ ಗಾಂಧಿ ಬಿಗ್ ರಿಲೀಫ್‌

ಸೆಕ್ಸ್‌ಗೆ ನಿರಾಕರಿಸಿದ ಲವರ್‌, ಹತ್ಯೆ ಬಳಿಕ ಶವದ ಜತೆಯೇ ಆತನ ಕಾಮ ಕೃತ್ಯ

ಬಾಂಗ್ಲಾದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಾರಿಕ್ ರೆಹಮಾನ್‌

ಸರ್ಕಾರೀ ಭೂಮಿಯಲ್ಲಿ ಕಾಂಗ್ರೆಸ್ ಭವನ: ದಾಖಲೆ ಬಿಡುಗಡೆ ಮಾಡಿದ ಬಿಜೆಪಿ

ಮುಂದಿನ ಸುದ್ದಿ
Show comments