Publish Date: Tue, 26 Mar 2019 (15:55 IST)
Updated Date: Tue, 26 Mar 2019 (16:02 IST)
ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಕೇಸರಿ ಪಡೆ ತನ್ನ ಶಕ್ತಿ ಪ್ರದರ್ಶನ ನಡೆಸಿದೆ.
ತುಮಕೂರಿನಲ್ಲಿ ಕೆಸರಿ ಪಡೆ ಶಕ್ತಿ ಪ್ರದರ್ಶನ ಮಾಡಿದೆ.
ಸಾವಿರಾರು ಕಾರ್ಯಕರ್ತರೊಂದಿಗೆ ಶಕ್ತಿ ಪ್ರದರ್ಶನಕ್ಕೆ ಮುಂದಾದ ಬಿಜೆಪಿ ಅಭ್ಯರ್ಥಿ, ಜಿ. ಎಸ್. ಬಸವರಾಜು ಅಧಿಕೃತ ನಾಮ ಪತ್ರ ಸಲ್ಲಿಕೆ ಮಾಡಿದರು.
ಶಕ್ತಿ ಪ್ರದರ್ಶನ ಮಾಡುವ ಮೂಲಕ ನಾಮ ಪತ್ರ ಸಲ್ಲಿಸಿದ್ರು ಜಿ.ಎಸ್. ಬಿ.
ಈಗಾಗಲೇ ಎರಡು ಬಾರಿ ನಾಮಪತ್ರವನ್ನು ಜಿ. ಎಸ್. ಬಸವರಾಜು ಸಲ್ಲಿಸಿದ್ದಾರೆ. ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಾಯಿತು. ಮಾಜಿ ಸಚಿವ ಸೋಮಣ್ಣ, ಜಿಲ್ಲೆಯ ಬಿಜೆಪಿ ಶಾಸಕರು, ಮುಖಂಡರು ಭಾಗಿಯಾಗಿದ್ದರು. ಕಾಲ್ ಟೆಕ್ಸ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಯಿತು.
ಮೆರವಣಿಗೆಯಲ್ಲಿ ಸಾವಿರಾರು ಮಹಿಳೆಯರು, ಕಾರ್ಯಕರ್ತರು ಭಾಗಿಯಾಗಿದ್ದರು. ಮೆರವಣಿಗೆಯಲ್ಲಿ ರಾರಾಜಿಸಿದ ಬಿಜೆಪಿ ಬಾವುಟ, ವಿವಿಧ ಕಲಾ ತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆಯಿತು.