Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ ಅತಿ ಕಿರಿಯ ಶಾಸಕ ಸಾಗರ್ ಖಂಡ್ರೆ

Sagara Khandre

Sampriya

ಬೆಂಗಳೂರು , ಶನಿವಾರ, 17 ಆಗಸ್ಟ್ 2024 (19:58 IST)
Photo Courtesy X
ಬೆಂಗಳೂರು: ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ  ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಶಾಸಕ ಸಾಗರ್‌ ಖಂಡ್ರೆ ಹೇಳಿದರು.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸಾಗರ್‌ ಖಂಡ್ರೆ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.

ರಾಜ್ಯದ ಜನಪ್ರಿಯ ಮುಖ್ಯಮಂತ್ರಿ  ಸನ್ಮಾನ್ಯ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದ ದ್ವೇಷ ರಾಜಕಾರಣದಿಂದಾಗಿ ರಾಜಭವನವನ್ನು ದುರುಪಯೋಗಪಡಿಸಿಕೊಂಡು ಮಾನ್ಯ ಮುಖ್ಯಮಂತ್ರಿಗಳ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. 134 ಸೀಟ್ ಗೆದ್ದು ಬಹುಮತದಿಂದ ಅಧಿಕಾರಕ್ಕೆ ಬಂದ ಚುನಾಯಿತ ಸರ್ಕಾರವನ್ನು ಉರುಳಿಸುವ ಬಿಜೆಪಿ ಹಾಗೂ ಜೆಡಿಎಸ್ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ಮುಡಾ ಇಲ್ಲಿ ಯಾವುದೇ ಹಗರಣ ನಡೆದಿಲ್ಲ ಸೈಟ್ ಹಂಚಿಕೆಯಾದಾಗ ಸಿದ್ದಾರಾಮಯ್ಯ ಅವರು ಅಧಿಕಾರದಲ್ಲಿ ಇರಲಿಲ್ಲ ಆವಾಗ ಬಿಜೆಪಿ ಅಧಿಕಾರದಲ್ಲಿ ಇತ್ತು ಇದರಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಏನು ಇಲ್ಲ ಎಂಬುದು ಸ್ಪಷ್ಟವಾಗಿ ಗೊತ್ತಿದ್ದರೂ ಅಧಿಕಾರ ದುರ್ಬಳಕೆ ಮಾಡಿಕೊಂಡು ಮುಖ್ಯಮಂತ್ರಿಗಳ ಹೆಸರಿಗೆ ಕಳಂಕ ತರುವ ಕೆಲಸ ಕೇಂದ್ರ ಸರ್ಕಾರ ಹಾಗೂ ರಾಜ್ಯದ ವಿರೋಧ ಪಕ್ಷದವರು ಮಾಡುತ್ತಿದ್ದಾರೆ.

ಹಿಂದುಳಿದ, ಶೋಷಿತ ವರ್ಗದವರು, ಬಡವರು, ನಿರ್ಗತಿಕರು ಹಾಗೂ ಸಾಮಾಜಿಕ ನ್ಯಾಯದ ತತ್ವ ಸಿದ್ಧಾಂತದ ಮೇಲೆ ರಾಜ್ಯದ ಎಲ್ಲಾ ಸಮುದಾಯಗಳ ಏಳಿಗೆಗಾಗಿ ಹಗಲಿರುಳು ಶ್ರಮ ವಹಿಸುತ್ತಿರುವ ಮಾನ್ಯ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಹಣಿಯಲು ಆಗದೆ ಹೀಗೆ ಅಧಿಕಾರ ದುರ್ಬಳಕೆ ಮಾಡಿಕೊಂಡು ಅವರ ವಿರುದ್ಧ ಮಾಡುತ್ತಿರುವ ಷಡ್ಯಂತ್ರವನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಜನರೇ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜೀನಾಮೆ ನೀಡುತ್ತಿರೋ ಅಥವಾ ಅರವಿಂದ ಕೇಜ್ರಿವಾಲ್ ಹಾದಿ ಹಿಡಿಯುತ್ತೀರೋ: ಸಿಎಂಗೆ ಪ್ರತಾಪ್ ಸಿಂಹ ಪ್ರಶ್ನೆ