Publish Date: Thu, 11 Nov 2021 (14:11 IST)
Updated Date: Thu, 11 Nov 2021 (14:18 IST)
ಇದೇ 14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ ಪ್ರತಿ ವರ್ಷ ನವೆಂಬರ್ 14ರಿಂದ ಸಹಕಾರ ಸಪ್ತಾಹ ಹಮ್ಮಿಕೊಳ್ಳಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಳು ದಿನ ಸಹಕಾರ ಸಪ್ತಾಹ ಹಮ್ಮಿಕೊಳ್ಳುವುದರ ಜೊತೆಗೆ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಮುಖ್ಯಮಂತ್ರಿ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದರು. ಈ ವರ್ಷ ಕೂಡ ಬೆಂಗಳೂರು ಮತ್ತು ವಿವಿಧ ಜಿಲ್ಲೆಗಳಲ್ಲಿ ಸಹಕಾರ ಸಪ್ತಾಹ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು.