Webdunia - Bharat's app for daily news and videos

Install App

ರಾಜ್ಯಪಾಲರನ್ನು ಸಮರ್ಥಿಸಿ ಅರೆ ಸಂವಿಧಾನ ತಜ್ಞರಾಗಲು ಹೊರಟಿರುವ ಸಾಹಿತಿ ಭೈರಪ್ಪ: ಕಾಂಗ್ರೆಸ್‌ ಟೀಕೆ

Sampriya
ಭಾನುವಾರ, 25 ಆಗಸ್ಟ್ 2024 (12:40 IST)
Photo Courtesy X
ಬೆಂಗಳೂರು: ಸಾಹಿತಿ ಎಸ್. ಎಲ್. ಭೈರಪ್ಪ ಅವರು ಕೇಂದ್ರ ಸರ್ಕಾರದಿಂದ ಪಡೆದಿರುವ 6 ಪ್ರಶಸ್ತಿಗಳಲ್ಲಿ ಐದು ಬಿಜೆಪಿಯ ಕಾರಣದಿಂದಲೇ ದೊರಕಿರುತ್ತದೆ. ಹೀಗಾಗಿ, ಭೈರಪ್ಪ ಅವರು ಋಣ ಸಂದಾಯದ ಕಾರಣಕ್ಕಾಗಿ ರಾಜ್ಯ ಸರ್ಕಾರವನ್ನು ಟೀಕಿಸಿ ರಾಜ್ಯಪಾಲರನ್ನು ಸಮರ್ಥಿಸಿ ಅರೆ ಸಂವಿಧಾನ ತಜ್ಞರಾಗಲು ಹೊರಟಿದ್ದಾರೆ ಎಂದು ಕೆಪಿಪಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಎಂದು ವ್ಯಂಗ್ಯವಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಪ್ರಕರಣ ನ್ಯಾಯಾಂಗದ ಅಂಗಳದಲ್ಲಿ ಇರುತ್ತದೆ. ಸಾಹಿತಿ ಎಸ್. ಎಲ್. ಭೈರಪ್ಪನವರು ತಮ್ಮ ಎಂದಿನ ಚಾಳಿಯಂತೆ ರಾಜ್ಯಪಾಲರ ಕ್ರಮವನ್ನು ಸಮರ್ಥಿಸಲು ಹೊರಟಿರುವುದು ಅವರ ಮನಸ್ಥಿತಿಗೆ ಹಿಡಿದ ಕನ್ನಡಿ ಆಗಿರುತ್ತದೆ ಎಂದು ಟೀಕಿಸಿದರು.

ಸ್ವಯಂಘೋಷಿತ ವಿಶ್ವ ವಿಖ್ಯಾತ ಸಾಹಿತಿ ಅರೆ ಸಂವಿಧಾನ ತಜ್ಞ ಎಸ್. ಎಲ್. ಭೈರಪ್ಪನವರಿಗೆ ನ್ಯಾಯಪೀಠಗಳ ತೀರ್ಪುಗಳನ್ನು ಓದಲು ಬಹುಶಃ ಸಮಯದ ಕೊರತೆ ಇರಬಹುದು? ಭೈರಪ್ಪನವರು ಬಿಜೆಪಿ ಕೇಂದ್ರ ಸರ್ಕಾರದಲ್ಲಿ ರಾಜ್ಯಪಾಲರ ಹುದ್ದೆಯ ಆಮಿಷವನ್ನೂ ಪಡೆದಿರಬಹುದು ಎಂದು ಕಾಲೆಳೆದಿದೆ.

 ಕೇಂದ್ರದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ ನಂತರ ಬೈರಪ್ಪನವರು ತಮ್ಮ ಸಾಹಿತ್ಯ ಮತ್ತು ಅಭಿಪ್ರಾಯಗಳನ್ನು ಸಂಪೂರ್ಣವಾಗಿ ಬಿಜೆಪಿಮಯಗೊಳಿಸಿದ್ದಾರೆ.  ಮೊದಲಿನಿಂದಲೂ ಮೂಲಭೂತವಾದಗಳಿಗೆ ತಮ್ಮ ಸಾಹಿತ್ಯವನ್ನು ಸಮರ್ಪಣೆಗೊಳಿಸಿಕೊಂಡಿರುವ ಭೈರಪ್ಪನವರು, ರಾಜ್ಯಪಾಲರ ನಡೆಯನ್ನು ಪ್ರಶ್ನಿಸಬಾರದು ಎಂದು ಹೇಳಿರುವುದು ಅವರ ಮನಸ್ಥಿಗೆಗೆ ಅನುಗುಣವಾಗಿ ಇರುತ್ತದೆ. ಬೈರಪ್ಪನವರು ಇಂತಹ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡುವ ಬದಲು ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳ ಚಟುವಟಿಕೆಗಳಲ್ಲಿ ಹೇಳಿದರೆ  ಹೆಚ್ಚು ಚಪ್ಪಾಳೆ ಗಿಟ್ಟಿಸಬಹಹುದು ಎಂದು ಟೀಕಿಸಿದ್ದಾರೆ.

ಭೈರಪ್ಪನವರು ಇಂತಹ ವಿಷಯಕ್ಕೆ ಮೂಗು ತೂರಿಸಿ ಮಾತನಾಡುವ ಬದಲು ಭಾರತೀಯ ಜನತಾ ಪಕ್ಷದಲ್ಲಿ ಯಾವುದಾದರೂ ಹುದ್ದೆಯನ್ನು ಬೇಡಿ ಪಡೆದುಕೊಂಡು ರಾಜಕೀಯ ಹೇಳಿಕೆಗಳನ್ನು ನೀಡಿದರೆ ಅದು ಸರಿಯಾದ ಕ್ರಮವಾಗುತ್ತದೆ. ಕೇವಲ ಯಾರನ್ನೋ ಮೆಚ್ಚಿಸಲು ಇಂತಹ ಹೇಳಿಕೆಗಳನ್ನು ನೀಡಿ ನಗೆಪಾಟಳೆಗೆ ಗುರಿಯಾಗಿ ಬೆತ್ತಲಾಗುವುದು ಬೇಡ. ಬಹುಶಃ ಇಂತಹ ಹೇಳಿಕೆಗಳ ಮೂಲಕ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿಶ್ವವಿದ್ಯಾಲಾಯಗಳಿಂದ ಮತ್ತೊಂದು ಗೌರವ ಡಾಕ್ಟರೇಟ್ ಪಧವಿಯ ನಿರೀಕ್ಷೆಯನ್ನು ಇಟ್ಟುಕೊಂಡಿರಬಹುದು. ಭೈರಪ್ಪನವರ ಈ ಹೇಳಿಕೆಗೆ ಬಿಜೆಪಿ ಆಡಳಿತದ ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ ನೀಡಿದರೂ ಆಶ್ಚರ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments