Publish Date: Fri, 31 Jan 2025 (17:38 IST)
Updated Date: Fri, 31 Jan 2025 (17:41 IST)
ಮುಂಬೈ: ನಟ ಸೈಫ್ ಅಲಿ ಖಾನ್ ಮೇಲೆ ನಡೆದ ಚಾಕು ಇರಿತ ಪ್ರಕರಣದ ಆರೋಪಿ ಮೊಹಮ್ಮದ್ ಷರೀಫುಲ್ ಇಸ್ಲಾಂಗೂ ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬರುವ ವ್ಯಕ್ತಿಯೇ ಎಂದು ಪೊಲೀಸರು ದೃಢಪಡಿಸಿದ್ದಾರೆ.
ಜನವರಿ 16 ರ ಮುಂಜಾನೆ ಬಾಂದ್ರಾ ಮಹಡಿಯ 12 ನೇ ಮಹಡಿಯಲ್ಲಿರುವ ಸೈಫ್ ಅಲಿ ಖಾನ್ ಅವರ ನಿವಾಸವನ್ನು ದರೋಡೆ ಮಾಡಲು ಇಸ್ಲಾಂ ಪ್ರವೇಶಿಸಿದ್ದಾನೆ.
ಹಲ್ಲೆಗೊಳಗಾದ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ವೈದ್ಯರು ತುರ್ತು ಶಸ್ತ್ರಚಿಕಿತ್ಸೆ ನಡೆಸಿದರು. ಆಸ್ಪತ್ರೆಯಲ್ಲಿ ಐದು ದಿನಗಳ ಕಾಲ ಚಿಕಿತ್ಸೆ ಪಡೆದ ನಂತರ ಆಸ್ಪತ್ರೆಯಿಂದ ರಿಲೀಸ್ ಆಗಿದ್ದರು. ಇದೀಗ ನಟ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಹಲ್ಲೆ ಮಾಡಿದ ಆರೋಪಿಗೂ ಸಿಸಿಟಿವಿಯಲ್ಲಿ ಕಂಡುವರುವ ವ್ಯಕ್ತಿಗೆ ಹೋಲಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಬಾಂಗ್ಲಾದೇಶದ ಪ್ರಜೆ ಇಸ್ಲಾಂನನ್ನು ಜನವರಿ 19 ರಂದು ನೆರೆಯ ನಗರವಾದ ಥಾಣೆಯಲ್ಲಿ ಬಂಧಿಸಲಾಯಿತು.