Select Your Language

Notifications

webdunia
webdunia
webdunia
webdunia

ಸಜ್ಜನ ರಾಜಕಾರಣಿ ಎಸ್‌ಎಂ ಕೃಷ್ಣಗೆ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ

SM Krishna No More, SM Krishna Tributes in Assembly, Speaker UT Khadar

Sampriya

ಬೆಂಗಳೂರು , ಮಂಗಳವಾರ, 10 ಡಿಸೆಂಬರ್ 2024 (17:40 IST)
Photo Courtesy X
ಬೆಂಗಳೂರು: ‌‌‌‌ಇಂದು ನಿಧನರಾದ ಕೇಂದ್ರ ಸಚಿವ ಮಾಜಿ ಎಸ್‌ಎಂ ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸದನ ಆರಂಭವಾಗುದ್ದಂತೆ, ಸ್ಪೀಕರ್ ಯು ಟಿ ಖಾದರ್ ಅವರು ಸಂತಾಪ ಸೂಚಿಸಿ ಕೃಷ್ಣ ಅವರನ್ನು ಧೀಮಂತ ವ್ಯಕ್ತಿ ಎಂದು ಬಣ್ಣಿಸಿದರು.

ಕೃಷ್ಣ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ, ವಿಧಾನಸಭೆ, ವಿಧಾನ ಪರಿಷತ್ತು, ಲೋಕಸಭೆ ಮತ್ತು ರಾಜ್ಯಸಭೆ - ಎಲ್ಲಾ ನಾಲ್ಕು ಸದನಗಳ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಸಕಾರಾತ್ಮಕ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದರು ಎಂದರು.

"ಕೃಷ್ಣ ಅವರಿಗೆ ಯಾರ ಮೇಲೂ ದ್ವೇಷ ಇರಲಿಲ್ಲ ಮತ್ತು ಅವರು ನಿರ್ವಹಿಸಿದ ಕಚೇರಿಗೆ ಯಾವಾಗಲೂ ಘನತೆಯನ್ನು ತಂದಿದ್ದಾರೆ. ಅವರ ಜೀವನ ಯುವ ರಾಜಕಾರಣಿಗಳಿಗೆ ಒಂದು ಸಂದೇಶವಾಗಿದೆ. ನಮಗೆ ಉತ್ತಮ ರಾಜಕಾರಣಿಗಳು ಸಿಗಬಹುದು, ಆದರೆ ಅವರಂತಹ ಅತ್ಯುತ್ತಮ ರಾಜಕಾರಣಿ ಸಿಗುವುದು ಕಷ್ಟ ಎಂದು ಹೇಳಿದರು.

ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೃಷ್ಣ ಅವರು ಸಜ್ಜನ ರಾಜಕಾರಣಿ ಮತ್ತು ದೂರದೃಷ್ಟಿಯುಳ್ಳವರು ಎಂದರು.




Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿ ವಿಧಾನಸಭಾ ಚುನಾವಣೆ: ಆಟೋ ಚಾಲಕರಿಗೆ ₹10 ಲಕ್ಷ ವಿಮೆ, ಮಗಳ ಮದುವೆ ₹1 ಲಕ್ಷ ಘೋಷಿಸಿದ ಅರವಿಂದ್