Publish Date: Thu, 17 Mar 2022 (18:37 IST)
Updated Date: Thu, 17 Mar 2022 (16:39 IST)
ವಿಧಾನಸಭೆಯಲ್ಲಿ ಈ ಬಗ್ಗೆ ಸದಸ್ಯರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಈಗಾಗಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು 7ನೇ ವೇತನ ಆಯೋಗದ ಅನ್ವಯ ಕೇಂದ್ರ ಸರ್ಕಾರಿ ನೌಕರರಿಗೆ ವೇತನ ನೀತಿ ಜಾರಿಗೊಳಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೂ ವೇತನ ಪರಿಷ್ಕರಣೆ ಸಲುವಾಗಿ ಸಮಿತಿ ರಚಿಸುವಂತೆ ಪತ್ರ ಬರೆದಿರೋದಾಗಿ ಹೇಳಿದರು.
ಸರ್ಕಾರಿ ನೌಕರರ ವೇತನ ಪರಿಷ್ಕರಣ ಸಂಬಂಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರದಿಂದ ಆಯೋಗ ರಚನೆ ಮಾಡೋದಾಗಿ ಸಿಎಂ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಘೋಷಣೆ ಮಾಡಿದರು.