ಅಡವಿಟ್ಟ ಕಾರ್​​ಗಳ ಮಾರಾಟ!

Webdunia
ಶನಿವಾರ, 15 ಅಕ್ಟೋಬರ್ 2022 (18:36 IST)
ಹೈ ಎಂಡ್ ಕಾರುಗಳನ್ನ ಅಡವಿಟ್ಟು ಸಾಲ ತೆಗೆದುಕೊಳ್ಳುವವರೇ ಎಚ್ಚರ. ಯಾಕಂದ್ರೆ ಎಮರ್ಜೆನ್ಸಿಗೆ ಹಣ ಬೇಕು ಅಂತಾ ಕಾರು ಅಡವಿಟ್ಟು ಹಣ ಪಡೆದ್ರೆ ನಿಮ್ಮ ಕಾರು ಯಾರಿಗೋ ಮಾರಾಟವಾಗಬಹುದು. ನಿಮ್ಮ ಕಾರನ್ನ ನಿಮಗೆ ಗೊತ್ತಿಲ್ಲದೇ ಹಾಗೇ ಮಾರಾಟ ಮಾಡ್ತಾರೆ ಈ ಖದೀಮರು. ಹೈ-ಎಂಡ್ ಕಾರುಗಳನ್ನ ಅಡವಿಟ್ಟುಕೊಂಡು ಬೇರೆಯವರಿಗೆ ಮಾರಾಟ ಮಾಡುತ್ತಿದ್ದ ನದೀಮ್, ಉಮರ್ ಫಾರುಕ್ ಸೇರಿ ಒಟ್ಟು 6 ಜನ ಆರೋಪಿಗಳನ್ನ ಬೆಂಗಳೂರಿನ ಪುಲಕೇಶಿ ನಗರ ಪೊಲೀಸರು ಬಂಧಿಸಿದ್ಧಾರೆ. ಒಟ್ಟು 14 ಹೈ ಎಂಡ್ ಕಾರುಗಳನ್ನ ಪೊಲೀಸರಯ ವಶಪಡಿಸಿಕೊಂಡಿದ್ದಾರೆ. ತುರ್ತಾಗಿ ಹಣ ಬೇಕಾದಾಗ ಕಾರನ್ನ ಅಡವಿಟ್ಟು ಕೆಲ ಶ್ರೀಮಂತರು ಹಣ ಪಡೆಯುತ್ತಿದ್ದರು. ಇದೀಗ ಆದಿ ಕೇಶವಲು ಮೊಮ್ಮಗ ಗೀತಾವಿಷ್ಣು ಕಾರನ್ನ ಕೂಡ ಬೇರೆಯವರಿಗೆ ಮಾರಾಟ ಮಾಡಿದ್ದಾರೆ ಈ ಖದೀಮರು. ಇನ್ನು ಕಾರನ್ನ ಮಾರಾಟ ಮಾಡುವಾಗ ನಂಬರ್ ಪ್ಲೇಟ್ ಹಾಗೂ ಡಾಕ್ಯುಮೆಂಟ್ಸ್ ಚೇಂಜ್ ಮಾಡಿ ಮಾರಾಟ ಮಾಡುತ್ತಿದ್ದರು ಎಂದು ಗೊತ್ತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments