Publish Date: Thu, 09 May 2024 (17:31 IST)
Updated Date: Thu, 09 May 2024 (17:54 IST)
ಬೆಂಗಳೂರು: ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಹೇಳಿಕೆಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಆಕ್ರೋಶ ಹೊರಹಾಕಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಭಾರತದ ಜನರು ಐದು ಸಾವಿರ ವರ್ಷಗಳ ಇತಿಹಾಸ ಹೊಂದಿದ್ದಾರೆ. ಇದನ್ನು ತಿಳಿಯದೆ ನಮ್ಮನ್ನು ಆಫ್ರಿಕನ್ನರು ಎನ್ನುವ ಸ್ಯಾಮ್ ಅವರು ಶಾಂತಿ ಕದಡಿದ್ದಾರೆ ಎಂದರು.
ಇನ್ನೂ ಸ್ಯಾಮ್ ಅವರ ಹೇಳಿಕೆ ಕಾಂಗ್ರೆಸ್‌ನ ಮನಸ್ಥಿತಿಯನ್ನು ತೋರಿಸುತ್ತದೆ. ವರ್ಣಭೇದ ನೀತಿ ಹಾಗೂ ಬಣ್ಣದ ಕುರಿತು ಮಾತಾಡುವುದು ಕಾಂಗ್ರೆಸ್‌ನ ಡಿಎನ್‌ಎಯಲ್ಲಿದೆ ಎಂದರು.
ನುಡಿದಂತೆ ನಡೆಯುವ ಸಿಎಂ ಸಿದ್ದರಾಮಯ್ಯ ಅವರು ಐದು ಗ್ಯಾರಂಟಿ ಬಗ್ಗೆ ಹೇಳುತ್ತಿದ್ದಾರೆ. ಆದರೆ ಈಗ ಬಿಳಿ ಗ್ಯಾರಂಟಿ, ಕಪ್ಪು ಗ್ಯಾರಂಟಿ, ಚೈನೀಸ್ ಗ್ಯಾರಂಟಿ, ಅರಬ್ಬಿ ಗ್ಯಾರಂಟಿ, ಆಫ್ರಿಕಾ ಗ್ಯಾರಂಟಿಯನ್ನು ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.