Publish Date: Tue, 23 Dec 2025 (18:13 IST)
Updated Date: Tue, 23 Dec 2025 (18:17 IST)
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಯ್ದಿರಿಸಿದೆ.
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಕೋರಿ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಕೊಲೆ ಪ್ರಕರಣ ದಾಖಲಾಗಿ ಐದು ತಿಂಗಳು 10 ದಿನ ಆಗಿದೆ. 18 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ. ಏಳರಿಂದ ಎಂಟು ಆರೋಪಿಗಳು ಕೊಲೆ ಸಂದರ್ಭದಲ್ಲಿ ಅಪರಿಚಿತರರು ಇದ್ದಾರೆ. ಆದರೆ, ಬಸವರಾಜ್ ಅವರನ್ನ ಎ-5 ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖ ಮಾಡಿದ್ದಾರೆ.
ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಕೋರ್ಟ್, ಪ್ರಕರಣದಲ್ಲಿ ಎ5 ಭೈರತಿ ಬಸವರಾಜ್ ಪಾತ್ರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದೆ. ಹೈಕೋರ್ಟ್‌ಗೆ ನೀಡಿದ್ದ ಮಾಹಿತಿಯನ್ನು ಸಲ್ಲಿಸುವಂತೆ ಎಸ್‌ಪಿಪಿಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಸೂಚಿಸಿದ್ದಾರೆ.