ಬಂಧನದ ಭೀತಿಯಲ್ಲೇ ಬೆಳ್ತಂಗಡಿ ಠಾಣೆಗೆ ಮೂರು ವಕೀಲರೊಂದಿಗೆ ವಿಚಾರಣೆಗೆ ಹಾಜರಾದ ಸಮೀರ್‌

Sampriya
ಭಾನುವಾರ, 24 ಆಗಸ್ಟ್ 2025 (13:17 IST)
ಮಂಗಳೂರು: ಸುಮೋಟೊ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್‌ ಸಮೀರ್‌ ಎಂ.ಡಿ. ಕೊನೆಗೂ ಬೆಳ್ತಂಗಡಿ ಪೊಲೀಸ್ ಠಾಣೆ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಮೂವರು ವಕೀಲರೊಂದಿಗೆ ಬಂದ ಸಮೀರ್‌ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸಲು ದಾಖಲೆಯೊಂದಿಗೆ ಹಾಜರಾಗಿದ್ದಾರೆ. 

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣದಲ್ಲಿ ಇಂದು ಸಮೀರ್‌ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿಂದೆ ವಿಚಾರಣೆಗೆ ಹಾಜರಾಗದ ಕಾರಣಕ್ಕೆ ಪೊಲೀಸರು ವಶಕ್ಕೆ ಪಡೆಯಲು ಸಿದ್ಧತೆ ನಡೆಸಿದ್ದರು. ಆದರೆ, ಜಾಮೀನು ಪಡೆದು ರಿಲೀಫ್‌ ಪಡೆದಿದ್ದರು. ಆದರೆ, ವಿಚಾರಣೆಗೆ ಹಾಜರಾಗುವಂತೆ ಕೋರ್ಟ್‌ ನಿರ್ದೇಶನ ನೀಡಿತ್ತು. 

ಧರ್ಮಸ್ಥಳದಲ್ಲಿ ಅಪಪ್ರಚಾರದ ಆರೋಪ ಎದುರಿಸುತ್ತಿರೋ ಸಮೀರ್, ತಮ್ಮ ವಿಡಿಯೋದಲ್ಲಿ ದಂಗೆ ಏಳುವಂತೆ ಜನರಿಗೆ ಪ್ರಚೋದಿಸಿದ್ದರು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯಲ್ಲಿ ದೊಂಬಿ, ಪ್ರಚೋದನೆ ಸೇರಿದಂತೆ ಹಲವರು ಕೇಸ್‌ಗಳು ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ನೀಡಿದ್ದ ಕೋರ್ಟ್‌ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.  

ಕೋರ್ಟ್‌ ಜಾಮೀನು ಬಳಿಕ ಧರ್ಮಸ್ಥಳದಲ್ಲಿ ತನಗೆ ಜೀವ ಬೆದರಿಕೆ ಇರುವುದಾಗಿ ಹೇಳಿಕೊಂಡಿದ್ದರು. ಈ ಹಿನ್ನೆಲೆ ಬೆಳ್ತಂಗಡಿ ಠಾಣೆಗೆ ಹಾಜರಾಗಲು ಪೊಲೀಸರು ಸೂಚಿಸಿದ್ದರು. ಅದರಂತೆ ಸಮೀರ್‌ ಇಂದು ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಬರುದ್ದಾರೆ. ಬೆಳಿಗ್ಗೆ 10.30ಕ್ಕೆ ಬರುವುದಾಗಿ ತಿಳಿಸಿದ್ದ ಸಮೀರ್‌ ತಡವಾಗಿ ಬಂದಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಮುಂದಿನ ಸುದ್ದಿ
Show comments