Webdunia - Bharat's app for daily news and videos

Install App

ತನಿಖೆ ಮುನ್ನಾ ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರಬಾರದು: ಸ್ಪೀಕರ್ ಯುಟಿ ಖಾದರ್‌

Sampriya
ಸೋಮವಾರ, 21 ಜುಲೈ 2025 (14:27 IST)
ಮಂಗಳೂರು: ವ್ಯಕ್ತಿಯೊಬ್ಬರ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ  ರಚನೆ ಮಾಡಿಎ. ಸಮಪರ್ಕ ತನಿಖೆಯಿಂದ ಸತ್ಯ ಹೊರಬರಲಿದೆ. ಆದರೆ ತನಿಖೆ ಪೂರ್ವದಲ್ಲೆ ಪೂರ್ವಗ್ರಹದ ತೀರ್ಮಾನಕ್ಕೆ ಬರುವುದು ಸರಿಯಲ್ಲ. ಪವಿತ್ರ ಕ್ಷೇತ್ರಕ್ಕೆ ಧಕ್ಕೆಯಾಗಬಾರದು ಎಂದು ಸ್ಪೀಕರ್ ಯುಟಿ ಖಾದರ್‌ ಹೇಳಿದ್ದಾರೆ. 

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆಯ ಮುಂಗಾರು ಅಧಿವೇಶನವು ಆಗಸ್ಟ್ 11ರಿಂದ 22ರವರೆಗೆ ನಡೆಯಲಿದೆ. ಅಧಿವೇಶನದ ಅವಧಿ ವಿಸ್ತರಣೆ ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಕಮಿಟಿ ಚರ್ಚಿಸಿ ಅಂತಿಮಗೊಳಿಸುತ್ತದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಬದಲಾಯಿಸಿ 'ಮಂಗಳೂರು' ಎಂದು ಮರುನಾಮಕರಣ ಮಾಡಬೇಕೆಂಬ ವಿಚಾರ ಚರ್ಚೆಯಲ್ಲಿದೆ.‌ ಹೆಸರಿನ ಹಿಂದೆ ಪರಂಪರೆ, ಇತಿಹಾಸ, ಸಂಸ್ಕೃತಿ ಎಲ್ಲವೂ ಅಡಕವಾಗಿರುತ್ತವೆ. ಹಿರಿಯರು, ಸಾಹಿತಿಗಳು, ಬರಹಗಾರರು, ತಜ್ಞರ ಜೊತೆ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ಒಮ್ಮತದ ಅಭಿಪ್ರಾಯಕ್ಕೆ ಬರಬೇಕು ಎಂದರು. 

ಮಂಗಳೂರು ಅಭಿವೃದ್ಧಿಯಾಗಲು ಹೆಸರಿಗಿಂತ ಈ ನೆಲದಲ್ಲಿ ಸೌಹಾರ್ದ ವಾತಾವರಣ ಬೇಕು. ಅದಕ್ಕೆ ನಾವೆಲ್ಲರೂ ಪ್ರಯತ್ನಿಸಬೇಕು. ಹೆಸರಿಗಿಂತ ಪ್ರೀತಿ, ವಿಶ್ವಾಸ, ಭಯರಹಿತ, ದ್ವೇಷರಹಿತ ಸಮಾಜ ಮಂಗಳೂರಿಗೆ ಅತಿ ಅಗತ್ಯವಾಗಿದೆ. ಇದರ ಬಗ್ಗೆ ಚರ್ಚೆಯಾಗಲಿ‌’ ಎಂದು ಖಾದರ್ ಹೇಳಿದರು‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತನಿಖೆ ಮುನ್ನಾ ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರಬಾರದು: ಸ್ಪೀಕರ್ ಯುಟಿ ಖಾದರ್‌

ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ರಿಲೀಫ್: ಇಡಿಗೆ ಸುಪ್ರೀಂಕೋರ್ಟ್ ಛೀಮಾರಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಮುಂದಿನ ಸುದ್ದಿ
Show comments