Select Your Language

Notifications

webdunia
webdunia
webdunia
webdunia

ಹಿರಿಯ ನಟ ಶಿವರಾಮ್ ಇನ್ನಿಲ್ಲ..!!!

ಹಿರಿಯ ನಟ ಶಿವರಾಮ್ ಇನ್ನಿಲ್ಲ..!!!
ಬೆಂಗಳೂರು , ಶನಿವಾರ, 4 ಡಿಸೆಂಬರ್ 2021 (14:20 IST)
ನಟ ಶಿವರಾಂ ಅವರು 5 ದಿನಗಳ ಹಿಂದೆ ಕಾರ್ ಅಪಘಾತದಲ್ಲಿ ತ್ರೀವವಾಗಿ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು, ಈ ವೇಳೆಯಲ್ಲಿ ಅವರು ಅಯ್ಯಪ್ಪನ ಪೂಜೆ ಮಾಡಲು ರೂಂಗೆ ಹೋಗಿದ್ದರು. ಆಗ ಜಾರಿ ಬಿದಿದ್ದಾರೆ. ಕೂಡಲೇ ಅವರನ್ನು, ಆಸ್ಪತ್ರೆಗೆ ಕರೆದುಕೊಂಡು ಬಂದು ಸ್ಕ್ಯಾನಿಂಗ್ ಮಾಡಿಸಿದ ವೇಳೆಯಲ್ಲಿ, ಸ್ಕ್ಯಾನಿಂಗ್ ರಿಪೋರ್ಟ್‌ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದದನ್ನು ವೈದ್ಯರು ಕಂಡು ಹಿಡಿದಿದ್ದಾರೆ. ಇನ್ನೂ ಅವರಿಗೆ ವಯಸ್ಸಾದ ಹಿನ್ನೆಲೆ ಸರ್ಜರಿ ಮಾಡಲು ಸಾಧ್ಯವಾಗಲಿಲ್ಲ, ಬದಲಿಗೆ ಅವರಿಗೆ ಐಸಿಯುನಲ್ಲೇ ಅವರಿಗೆ ಚಿಕಿತ್ಸೆ ನೀಡಲಾಗುತಿತ್ತು,ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ಕೊನೆ ಉಸಿರು ಎಳೆದಿದ್ದಾರೆ.
 
ಎಸ್. ಶಿವರಾಮ್ (ಜನನ 1938) ಕನ್ನಡದ ಹಿರಿಯ ಚಿತ್ರನಟನಟರಾಗಿದ್ದು. ಇವರು ನೂರಾರು ಕನ್ನಡ ಚಿತ್ರಗಳಲ್ಲಿ ಸುಮಾರು ಆರು ದಶಕಗಳ ಕಾಲ ಪೋಷಕನಟನಾಗಿ ಕಾಣಿಸಿಕೊಂಡಿದ್ದರು. ನಿರ್ದೇಶಕನಾಗಿ, ನಿರ್ಮಾಪಕನಾಗು ಕೂಡಾ ಚಿತ್ರರಂಗಕ್ಕೆ ತನ್ನ ಕೊಡುಗೆ ನೀಡಿದ್ದಾರೆ. ತನ್ನ ಸಹೋದರ ಎಸ್.ರಾಮನಾಥನ್‍ರವರೊಂದಿಗೆ ಸೇರಿ ರಾಶಿ ಬ್ರದರ್ಸ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಹಲವಾರು ಚಿತ್ರಗಳನ್ನು ನಿರ್ಮಿಸಿದರು.ಇದರಲ್ಲಿ ಬಾಲಿವುಡ್ ಚಿತ್ರ ಕೂಡಾ ಸೇರಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಯ ಅಕ್ರಮ ಸಂಬಂಧದಿಂದ ಬಲಿಯಾಗಿದ್ದು ಪತಿಯ ಪ್ರಾಣ