Publish Date: Sat, 06 Nov 2021 (13:31 IST)
Updated Date: Sat, 06 Nov 2021 (13:35 IST)
ರಾಜ್ಯದ 550 ಚಿತ್ರಮಂದಿರಗಳಲ್ಲಿ ನಾಳೆ ಪುನೀತ್ ರಾಜ್ ಕುಮಾರ್ ರಿಗೆ ನಮನ
ಪುನೀತ್ ರಾಜ್ ಕುಮಾರ್ ಅವರ ಹಠಾತ್ ನಿಧನದ ನೋವಿಂದ ಕರುನಾಡಿಗರು ಇನ್ನೂ ಹೊರಬಂದಿಲ್ಲ. ಈ ನಡುವೆ ಪುನೀತ್ ರಾಜಕುಮಾರ್ ಅವರಿಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳು ನಮನ ಸಲ್ಲಿಸಲು ಸಿದ್ಧತೆ ನಡೆದಿದೆ..ನಾಳೆ ಸಂಜೆ 6ಕ್ಕೆ ರಾಜ್ಯದ ಚಿತ್ರಮಂದಿರಗಳಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ಚಿತ್ರ ಪ್ರದರ್ಶಕರಿಂದ ಪುನೀತ್‌ಗೆ ನಮನ ಸಲ್ಲಿಸಲಾಗುವುದು.
ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ಗೀತಾಂಜಲಿ, ನಟ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಚಿತ್ರಮಂದಿರಗಳಲ್ಲಿ ಮೊಂಬತ್ತಿ ಹಚ್ಚಿ ಪುನೀತ್‌ಗೆ ದೀಪಾಂಜಲಿ ನಡೆಸಲಾಗುವುದು.
ನಂತರ ಮೌನಾಚರಣೆ ಮೂಲಕ ಪುನೀತ್ ರಾಜ್‌ಕುಮಾರ್‌ಗೆ ನಮನ ಸಲ್ಲಿಸಲಾಗುವುದು. ಈ ಮೂಲಕ ಥಿಯೇಟರ್ ಸಿಬ್ಬಂದಿ, ಅಭಿಮಾನಿಗಳು ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.