Select Your Language

Notifications

webdunia
webdunia
webdunia
webdunia

ಯತ್ನಾಳ್​ಗೆ ಸಂಗಮೇಶ್ ನಿರಾಣಿ ತಿರುಗೇಟು

ಯತ್ನಾಳ್​ಗೆ ಸಂಗಮೇಶ್ ನಿರಾಣಿ ತಿರುಗೇಟು
bangalore , ಮಂಗಳವಾರ, 17 ಜನವರಿ 2023 (19:34 IST)
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ಮುರುಗೇಶ ನಿರಾಣಿ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ನಡುವೆ ಕಳೆದ ಕೆಲವು ದಿನಗಳಿಂದ ತೀವ್ರ ವಾಕ್ಸಮರ ನಡೆಯುತ್ತಿದೆ. ಆರಂಭದಲ್ಲಿ ಜೊತೆಗಿದ್ದ ನಿರಾಣಿ, ಸಚಿವ ಸ್ಥಾನ ಸಿಕ್ಕ ಬಳಿಕ ತಮ್ಮ ವರಸೆ ಬದಲಾಯಿಸಿದ್ದಾರೆಂಬ ಆರೋಪ ಮಾಡಿದ್ದ ಶಾಸಕ ಯತ್ನಾಳ್, ‘ಪಿಂಪ್ ಸಚಿವ’ ಪದ ಪ್ರಯೋಗ ಮಾಡಿದ್ದರು. ಯತ್ನಾಳ್ ಹೇಳಿಕೆಗೆ ಸಚಿವ ಮುರುಗೇಶ್ ನಿರಾಣಿ ಸಹೋದರ ಸಂಗಮೇಶ್ ನಿರಾಣಿ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಯತ್ನಾಳ್ ಭಾಷೆಯಲ್ಲಿಯೇ ಪದ ಪ್ರಯೋಗ ಮಾಡಿದ್ದಾರೆ. ಶಿಖಂಡಿ ಬಸ್ಯಾ ನಡುಬೀದಿಯಲ್ಲಿ ಬೆತ್ತಲಾಗುವ ಕಾಲ ಬಂದಿದೆ. ಬಾಯಿ ಹರುಕನಂತೆ ಮಾತನಾಡುವ ನಾಮರ್ಧ ನಿನ್ನದೇ ಭಾಷೆಯಲ್ಲಿಯೇ ಉತ್ತರ ನೀಡುತ್ತೇನೆ. ಒಬ್ಬ ಅಪ್ಪನಿಗೆ ಹುಟ್ಟದ ನಿನಗೆ ಅಂತ್ಯ ಹಾಡುವ ಕಾಲ ಬಂದಿದೆ. ನೇರ ಕಾದಾಟಕ್ಕೆ ಕಣಕ್ಕೆ ಬಂದರೆ ನಿನ್ನ ತಾಕತ್ತು ತಿಳಿಯುತ್ತದೆ. ರಾಜಕೀಯ ಮರುಜನ್ಮ ಕೊಟ್ಟವರಿಗೆ ರಾಜಕೀಯ ಮರಣ ಶಾಸನ ಬರೆಯುವುದು ಗೊತ್ತಿದೆ. ಲಕ್ಷಾಂತರ ಜನರಿಗೆ ಅನ್ನ, ಆಶ್ರಯ, ಜೀವನ ಕೊಟ್ಟ ಧರ್ಮಾತ್ಮ ಮುರುಗೇಶ ನಿರಾಣಿಯವರ ತೇಜೋವಧೆಗೆ ನಿಂತ ಮುಠ್ಠಾಳರಿಗೆ ಕಾಲವೇ ಉತ್ತರ ನೀಡುತ್ತದೆ. ಮುರುಗೇಶ ನಿರಾಣಿ ಎಂಬ ಪ್ರಖರ ಸೂರ್ಯನೆದುರು ನಿಂತವರು ಭಸ್ಮವಾಗಿದ್ದಾರೆ ನೆನಪಿರಲಿ ಎಂದು ಸಂಗಮೇಶ್ ನಿರಾಣಿ ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬ್ಲ್ಯಾಕ್​ಮೇಲ್ ತಂತ್ರ ನಡೆಯುವುದಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ