Select Your Language

Notifications

webdunia
webdunia
webdunia
webdunia

ರಾಯಣ್ಣ ಬ್ರಿಗೇಡ್‌ಗೆ ಬ್ರೇಕೂ ಇಲ್ಲಾ... ಏನೂ ಇಲ್ಲ: ಕೆ.ಎಸ್.ಈಶ್ವರಪ್ಪ

ಸಂಗೊಳ್ಳಿ ರಾಯಣ್ಣ ಬ್ರಿಗೇಡ್
ರಾಯಣ್ಣ ಬ್ರಿಗೇಡ್‌ಗೆ ಬ್ರೇಕ್ ಬಿತ್ತೆಂದು ಎಲ್ಲರು ಹೇಳುತ್ತಿದ್ದಾರೆ. ಆದರೆ, ರಾಯಣ್ಣ ಬ್ರಿಗೇಡ್‌ಗೆ ಬ್ರೇಕೂ ಇಲ್ಲಾ... ಏನೂ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌‌ಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ನಾನು ನೇರವಾಗಿ ಬ್ರಿಗೇಡ್ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ. ಇಂದು ಸಭೆಯಲ್ಲಿ ಮುಂದಿನ ಚಟುವಟಿಕೆಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
 
ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗದಂತೆ ನಡೆದುಕೊಳ್ಳಲು ತಿಳಿಸಿದ್ದಾರೆ. ಅದನ್ನು ಯಡಿಯೂರಪ್ಪ ಕೂಡಾ ಒಪ್ಪಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದರು. 
 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಭೆಯಲ್ಲಿ ಈಶ್ವರಪ್ಪ ಪಾಲ್ಗೊಳ್ಳುವ ಮೂಲಕ ಮತ್ತೆ ಯಡಿಯೂರಪ್ಪಗೆ ಟಾಂಗ್ ನೀಡಿದ್ದು, ಮತ್ತೆ ವಿರಸ ಉಲ್ಬಣಿಸುವ ಸಾಧ್ಯತೆಗಳಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಹಾಸಿಗೆ ಸಹಿತ ಮುಂಬೈಗೆ ಬಂದಿಳಿದ ವಿಶ್ವದ ದಢೂತಿ ಮಹಿಳೆ