Select Your Language

Notifications

webdunia
webdunia
webdunia
webdunia

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ ನಿಲ್ಲುವುದಿಲ್ಲ: ವಿರೂಪಾಕ್ಷ

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ ನಿಲ್ಲುವುದಿಲ್ಲ: ವಿರೂಪಾಕ್ಷ
ಬಾಗಲಕೋಟೆ , ಬುಧವಾರ, 25 ಜನವರಿ 2017 (14:43 IST)
ಯಾವುದೇ ಕಾರಣಕ್ಕೂ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ ನಿಲ್ಲುವುದಿಲ್ಲ ಎಂದು ಬ್ರಿಗೇಡ್ ರಾಜ್ಯಾಧ್ಯಕ್ಷ ಕೆ.ವಿರೂಪಾಕ್ಷ ಸ್ಪಷ್ಟಪಡಿಸಿದ್ದಾರೆ.
 
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೋ ನನ್ನ ಲೇಟರ್‌ಪ್ಯಾಡ್‌ನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಬ್ರೀಗೆಡ್ ಸಮಾವೇಶ ರದ್ದಾಗಲಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಆರೋಪಿಸಿದ್ದಾರೆ.
 
ಕಾಂತಿವೀರ ಸಂಗೊಳ್ಳಿ ರಾಯಣ್ಣರ ನೆನಪಿಗಾಗಿ ನಾಳೆ ಕೂಡಲ ಸಂಗಮದಲ್ಲಿ ಬಲಿದಾನ ದಿನವನ್ನು ಆಚರಿಸಲಾಗುತ್ತದೆ. ಈ ಸಮಾವೇಶಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೂ ಆಹ್ವಾನ ನೀಡಿದ್ದೇವೆ. ಆದರೆ, ಅವರು ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂದರು.
 
25 ಸ್ವಾಮೀಜಿಗಳ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣರ ಬಲಿದಾನ ದಿನವನ್ನು ಆಚರಿಸಲಾಗುತ್ತಿದ್ದು, ಈ ಸಮಾವೇಶದಲ್ಲಿ ಮಾಜಿ ಸಂಸದರು ಹಾಗೂ ಶಾಸಕರು ಭಾಗಿಯಾಗಲಿದ್ದಾರೆ ಎಂದು ಬ್ರಿಗೇಡ್ ರಾಜ್ಯಾಧ್ಯಕ್ಷ ಕೆ.ವಿರೂಪಾಕ್ಷ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಿಯಾಂಕಾ ಹೇಳಿಕೊಳ್ಳುವಷ್ಟು ಸುಂದರಿಯೇನಿಲ್ಲ: ವಿನಯ್ ಕಟಿಯಾರ್