Publish Date: Thu, 24 Nov 2022 (08:26 IST)
Updated Date: Thu, 24 Nov 2022 (08:29 IST)
ಬೆಳಗಾವಿ : ಅಭಿವೃದ್ಧಿ ಕೆಲಸ ಮಾಡಿದ್ದರೆ ಟಿಫಿನ್ ಬಾಕ್ಸ್ ಹಂಚುವ ಅವಶ್ಯಕತೆ ಇರುತ್ತಿರಲಿಲ್ಲ ಎನ್ನುವ ಮೂಲಕ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅಂಜಲಿ ನಿಂಬಾಳ್ಕರ್ಗೆ ಮಾಜಿ ಶಾಸಕ ಸಂಜಯ್ ಪಾಟೀಲ್ ಟಾಂಗ್ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಂಚುವವರು ಹಂಚುತ್ತಾರೆ. ನಾನು ಸದ್ಯಕ್ಕೆ ಜಿಲ್ಲಾಧ್ಯಕ್ಷನಾಗಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ.
ನಾನು ಗಂಡಸಾಗಿ ಹೇಗೆ ಹಳದಿ, ಕುಂಕುಮ ಕಾರ್ಯಕ್ರಮ ಮಾಡೋಕೆ ಆಗುತ್ತದೆ? ಕಾರ್ಯಕ್ರಮ ಮಾಡಲು ಎಲ್ಲರಿಗೂ ಸ್ವಾತಂತ್ರ್ಯವಿದೆ. ಎಲ್ಲರೂ ಏನು ಬೇಕಾದರೂ ಕಾರ್ಯಕ್ರಮ ಮಾಡಬಹುದು. ಎಲ್ಲರೂ ಅವರವರ ಕಾರ್ಯಕ್ರಮ ಮಾಡುತ್ತಾರೆ.
ನಾನು ಪಕ್ಷದ ಜಿಲ್ಲಾಧ್ಯಕ್ಷನಾಗಿ ಪಕ್ಷ ಸಂಘಟನೆ ಬೆಳೆಸಲು ಪಕ್ಷದ ಕಾರ್ಯಕ್ರಮಗಳಲ್ಲಿ ಇರುತ್ತೇನೆ ಎಂದರು. ಗ್ರಾಮೀಣ ಕ್ಷೇತ್ರದಲ್ಲಿ ಟಿಫಿನ್ ಬಾಕ್ಸ್ ಹಂಚುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಟಿಫಿನ್ ಬಾಕ್ಸ್ ತೆಗೆದುಕೊಳ್ಳುವವರು, ತೆಗೆದುಕೊಳ್ಳುತ್ತಿರಬಹುದು. ಆದರೆ ಟಿಫಿನ್ ಬಾಕ್ಸ್ ಬಿಜೆಪಿ ಕಾರ್ಯಕರ್ತರು ಯಾರೂ ತೆಗೆದುಕೊಳ್ಳುವುದಿಲ್ಲ.