Publish Date: Sun, 05 Apr 2020 (07:31 IST)
Updated Date: Sun, 05 Apr 2020 (07:32 IST)
ಮುಂಬೈ : ಏಪ್ರಿಲ್ 5 ರಂದು ರಾತ್ರಿ 9 ಗಂಟೆಗೆ ಮನೆಯಲ್ಲಿ ದೀಪ ಬೆಳಗುವಂತೆ ದೇಶ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ ಹೇಳಿಕೆಗೆ ಶಿವಸೇನೆ ಸಂಸದ ಸಂಜಯ್ ರಾವತ್ ವ್ಯಂಗ್ಯ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಂಜಯ್ ರಾವತ್, ಈ ಹಿಂದೆ ಜನತಾ ಕರ್ಪ್ಯೂ ದಿನ ಮೋದಿ ಚಪ್ಪಾಳೆ ತಟ್ಟಲು ಜನರಿಗೆ ಹೇಳಿದ್ದರು. ಆದರೆ ಜನರು ರಸ್ತೆಗಳಿದು ಡ್ರಮ್ ಗಳನ್ನು ಬಾರಿಸಿದ್ದರು. ಆದರೆ ಈಗ ದೀಪ ಬೆಳಗಿಸುವ ವೇಳೆ ಜನರು ಅವರ ಮನೆಗಳನ್ನು ಸುಟ್ಟುಕೊಳ್ಳುವುದಿಲ್ಲ ಎಂದು ಭಾವಿಸುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.
ಹಾಗೇ ಸರ್ ದೀಪಗಳನ್ನು ಬೆಳಗಿಸಿ ಆದರೆ ದಯವಿಟ್ಟು ಕೊರೊನಾ ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರ ಏನು ಮಾಡುತ್ತಿದೆ ಎಂದು ನಮಗೂ ತಿಳಿಸಿ ಎಂದು ಪ್ರಧಾನಿ ಮೋದಿ ಬಳಿ ಮನವಿ ಮಾಡಿದ್ದಾರೆ.