Select Your Language

Notifications

webdunia
webdunia
webdunia
webdunia

ಸಂತೋಷ್ ಹೇಳಿಕೆ ಶತಮಾನದ ಜೋಕ್​

Santosh's statement
bangalore , ಶುಕ್ರವಾರ, 1 ಸೆಪ್ಟಂಬರ್ 2023 (16:00 IST)
40 ರಿಂದ 45 ಕಾಂಗ್ರೆಸ್‌ನ ಪ್ರಮುಖರು ನನ್ನ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ B.L.ಸಂತೋಷ್‌ರ ಹೇಳಿಕೆಗೆ ಕಾಂಗ್ರೆಸ್‌ ಟ್ವೀಟ್‌ ಮೂಲಕ ತಿರುಗೇಟು ನೀಡಿದೆ. ಸುಳ್ಳು ಹೇಳಿಕೊಂಡು ತಿರುಗುವ ಮುನ್ನ ಸಂತೋಷ್‌ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಸಾಧಿಸಲಿ.. ಜೊತೆಗೆ ವಿಶ್ವಾಸವನ್ನು ಸಾಧಿಸಲಿ. ಅವರ ಹೇಳಿಕೆ ಶತಮಾನದ ಜೋಕ್‌ ಎಂದು ಲೇವಡಿ ಮಾಡಿದೆ.. ಈ ಬಗ್ಗೆ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌, ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು. B.L.ಸಂತೋಷ್‌ ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ.. ಇನ್ನು ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್. ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಹಾಗೂ ವಿಶ್ವಾಸವನ್ನು ಹೊಂದಲು ಪ್ರಯತ್ನಿಸಲಿ ಎಂದು ತಿರುಗೇಟು ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಸಾಧ್ಯತೆ