ಸರಳ ವಾಸ್ತು ಗುರೂಜಿ ಭೀಕರ ಹತ್ಯೆ

Webdunia
ಮಂಗಳವಾರ, 5 ಜುಲೈ 2022 (15:51 IST)
ನಗರದ ಖಾಸಗಿ ಹೋಟೆಲ್​ನಲ್ಲಿ ಸರಳ ವಾಸ್ತು ಸಂಸ್ಥಾಪಕ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ವಿದ್ಯಾನಗರದ ಪ್ರಸಿಡೆಂಟ್​ ಹೋಟೆಲ್​ನಲ್ಲಿ ಚಂದ್ರಶೇಖರ ಗುರೂಜಿ ತಂಗಿದ್ದರು.
ಮಂಗಳವಾರ ಬೆಳಗ್ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.
 
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಆಯುಕ್ತ ಲಾಭೂರಾಮ, ಡಿಸಿಪಿ ಸಾಹಿಲ್ ಬಾಗ್ಲಾ ಪರಿಶೀಲನೆ ನಡೆಸಿದ್ದಾರೆ. ಜ್ಯೋತಿಷ್ಯದಿಂದ ನೊಂದವರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಭಕ್ತರ ಸೋಗಿನಲ್ಲಿ ಬಂದ ಕಿಡಿಗೇಡಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಚಾಕು ಹಿಡಿದು ಹೋಟೆಲ್​ನಿಂದ ಹೊರಗೆ ಓಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
 
ಸರಳ ವಾಸ್ತುವಿನ ಸಂಶೋಧಕರಾಗಿದ್ದ ಡಾ.ಚಂದ್ರಶೇಖರ ಅಂಗಡಿ(ಗುರೂಜಿ) ಅವರು ಚಿಕ್ಕಂದಿನಲ್ಲೇ ಆಧ್ಯಾತ್ಮದತ್ತ ಆಸಕ್ತಿ ಹೊಂದಿದ್ದರು. 8 ವರ್ಷ ವಯಸ್ಸಿನಲ್ಲಿದ್ದಾಗಲೇ ತಮ್ಮೂರಿನ ಹಳೆಯ ದೇವಾಲಯವೊಂದರ ಜೀರ್ಣೋದ್ಧಾರಕ್ಕಾಗಿ ಜನರಿಂದ ದೇಣಿಗೆ ಸಂಗ್ರಹಿಸಿ ಅಭಿವೃದ್ಧಿ ಮಾಡಿದ್ದರು. 14ನೇ ವಯಸ್ಸಿನಲ್ಲಿ ಭಾರತೀಯ ಸೇನೆಗೆ ಸೇರಬೇಕೆಂಬ ಬಯಕೆ ಅವರದ್ದಾಗಿತ್ತಾದರೂ ಅನಾರೋಗ್ಯ ಕಾರಣಕ್ಕೆ ಅದು ಸಾಕಾರಗೊಳ್ಳಲಿಲ್ಲ. ಸಿವಿಲ್ ಇಂಜಿನಿಯರ್​ ಪದವಿ ಪಡೆದ ಬಳಿಕ ಮುಂಬೈನಲ್ಲಿ ಕಾಂಟ್ರ್ಯಾಕ್ಟರ್ ಆಗಿ ಕೆಲಸ ಆರಂಭಿಸಿದ್ದರು. 1995 ರಲ್ಲಿ 'ಶರಣ ಸಂಕುಲ ಟ್ರಸ್ಟ್' ಆರಂಭಿಸಿ ಸಾಮಾಜಿಕ ಕಾರ್ಯದಲ್ಲಿ ನಿರತರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುವಜನತೆಗೆ ಯುವನಿಧಿ ಆಸರೆ: ಸೇವಾ ಸಿಂಧುವಿನಲ್ಲಿ ನೋಂದಾಯಿಸಲು ದಿನೇಶ್‌ ಗೂಳಿಗೌಡ ಮನವಿ

ಕಾನೂನುಬಾಹಿರವಾಗಿ ಕಾಂಗ್ರೆಸ್ ಭವನಕ್ಕೆ ನಿವೇಶನ ವಿರುದ್ಧ ಬಿಜೆಪಿ ಹೋರಾಟ

26ರಂದು ಯಡಿಯೂರಪ್ಪನವರ ಅಭಿಮಾನೋತ್ಸವದ ಭೂಮಿಪೂಜೆ

ಜಲ್ಮುರಿ ನಾನು ಸೇವಿಸಿದ್ರೆ, ಅದರ ಖಾರ ತಟ್ಟಿದ್ದು ಮಾತ್ರ ಟಿಎಂಸಿಗೆ: ಮೋದಿ ವ್ಯಂಗ್ಯ

ಮೇ 18ರಿಂದ ಎಸ್ಸೆಸ್ಸೆಲ್ಸಿ ಎರಡನೇ ಪರೀಕ್ಷೆ: ಮರುಮೌಲ್ಯಮಾಪನ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments