Select Your Language

Notifications

webdunia
webdunia
webdunia
webdunia

ಸರಸ್ವತಿ ಸಮ್ಮಾನ್‌ ಪುರಸ್ಕೃತ ಕನ್ನಡದ ಮೇರು ಸಾಹಿತಿ ಎಸ್‌.ಎಲ್‌. ಭೈರಪ್ಪ ಇನ್ನಿಲ್ಲ

Saraswati Samman Awarded Literary, Thinker S.L. Bhairappa, Padma Bhushan Award

Sampriya

ಬೆಂಗಳೂರು , ಬುಧವಾರ, 24 ಸೆಪ್ಟಂಬರ್ 2025 (15:03 IST)
Photo Credit X
ಬೆಂಗಳೂರು: ಸರಸ್ವತಿ ಸಮ್ಮಾನ್‌ ಪುರಸ್ಕೃತ ಕನ್ನಡದ ಮೇರು ಸಾಹಿತಿ, ಖ್ಯಾತ ಕಾದಂಬರಿಕಾರ, ಚಿಂತಕ ಎಸ್‌.ಎಲ್‌. ಭೈರಪ್ಪ ಅವರು ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ. 

ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಾಮರಾಜಪೇಟೆಯ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. 

ತಮ್ಮ 'ವಂಶವೃಕ್ಷ', 'ದಾಟು', 'ಪರ್ವ' ದಂತಹ ಕೃತಿಗಳ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದ ಅವರು, ಯುವ ಓದುಗರನ್ನೂ ಸೆಳೆದಿದ್ದರು. 

ಹಾಸನ ಜಿಲ್ಲೆಯ ಸಂತೇಶಿವರದಲ್ಲಿ ಜನಿಸಿದ್ದ ಅವರು ತಮ್ಮ ಕೃತಿಗಳ ಮೂಲಕ ಕನ್ನಡದ ಹೆಮ್ಮೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿದಿದ್ದರು. ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಅವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. 

ಎಸ್. ಎಲ್. ಭೈರಪ್ಪ ಅವರಿಗೆ ಸರಸ್ವತೀ ಸಮ್ಮಾನ್ (2010), ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1975), ಪದ್ಮಭೂಷಣ (2023) ಸೇರಿದಂತೆ ಹಲವಾರು ಪ್ರಮುಖ ಪ್ರಶಸ್ತಿಗಳು ಲಭಿಸಿವೆ. ತಮ್ಮ ಹುಟ್ಟೂರಿನ ಅಭಿವೃದ್ಧಿಗಾಗಿ ಮತ್ತು ಸಮಾಜದ ಇತರ ಕಾರ್ಯಗಳಿಗೆ ನೆರವು ನೀಡಲು ಡಾ. ಎಸ್. ಎಲ್. ಭೈರಪ್ಪ ಪ್ರತಿಷ್ಠಾನ ಸ್ಥಾಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಗಾಸಾ ಚಂಡಮಾರುತಕ್ಕೆ ತೈವಾನ್‌ ತತ್ತರ: 124 ಮಂದಿ ಕಣ್ಮರೆ, 14 ಮಂದಿ ಸಾವು