Webdunia - Bharat's app for daily news and videos

Install App

ಸರಸ್ವತಿ ಸಮ್ಮಾನ್‌ ಪುರಸ್ಕೃತ ಕನ್ನಡದ ಮೇರು ಸಾಹಿತಿ ಎಸ್‌.ಎಲ್‌. ಭೈರಪ್ಪ ಇನ್ನಿಲ್ಲ

Sampriya
ಬುಧವಾರ, 24 ಸೆಪ್ಟಂಬರ್ 2025 (15:03 IST)
Photo Credit X
ಬೆಂಗಳೂರು: ಸರಸ್ವತಿ ಸಮ್ಮಾನ್‌ ಪುರಸ್ಕೃತ ಕನ್ನಡದ ಮೇರು ಸಾಹಿತಿ, ಖ್ಯಾತ ಕಾದಂಬರಿಕಾರ, ಚಿಂತಕ ಎಸ್‌.ಎಲ್‌. ಭೈರಪ್ಪ ಅವರು ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ. 

ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಾಮರಾಜಪೇಟೆಯ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. 

ತಮ್ಮ 'ವಂಶವೃಕ್ಷ', 'ದಾಟು', 'ಪರ್ವ' ದಂತಹ ಕೃತಿಗಳ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದ ಅವರು, ಯುವ ಓದುಗರನ್ನೂ ಸೆಳೆದಿದ್ದರು. 

ಹಾಸನ ಜಿಲ್ಲೆಯ ಸಂತೇಶಿವರದಲ್ಲಿ ಜನಿಸಿದ್ದ ಅವರು ತಮ್ಮ ಕೃತಿಗಳ ಮೂಲಕ ಕನ್ನಡದ ಹೆಮ್ಮೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿದಿದ್ದರು. ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಅವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. 

ಎಸ್. ಎಲ್. ಭೈರಪ್ಪ ಅವರಿಗೆ ಸರಸ್ವತೀ ಸಮ್ಮಾನ್ (2010), ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1975), ಪದ್ಮಭೂಷಣ (2023) ಸೇರಿದಂತೆ ಹಲವಾರು ಪ್ರಮುಖ ಪ್ರಶಸ್ತಿಗಳು ಲಭಿಸಿವೆ. ತಮ್ಮ ಹುಟ್ಟೂರಿನ ಅಭಿವೃದ್ಧಿಗಾಗಿ ಮತ್ತು ಸಮಾಜದ ಇತರ ಕಾರ್ಯಗಳಿಗೆ ನೆರವು ನೀಡಲು ಡಾ. ಎಸ್. ಎಲ್. ಭೈರಪ್ಪ ಪ್ರತಿಷ್ಠಾನ ಸ್ಥಾಪಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಅಧ್ಯಾಯ 1 ವೀಕ್ಷಣೆಗೆ ಇಡೀ ಥಿಯೇಟರ್‌ ಅನ್ನೇ ಬುಕ್‌ ಮಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ

ಭಯೋತ್ಪಾದನೆ ನಿಲ್ಲಿಸದಿದ್ದರೆ, ಭೂಪಟದಲ್ಲೇ ಇಲ್ಲದಂತಾಗಿಸುತ್ತೇವೆ: ಪಾಕ್‌ಗೆ ಭಾರತ ಎಚ್ಚರ

ಸಿದ್ದರಾಮಯ್ಯರ ಹೊಸ ಮನೆ ಗೃಹಪ್ರವೇಶಕ್ಕೆ ಇವರಿಗಿಲ್ಲ ಎಂಟ್ರಿ

ಹುಲಿಗೆ ರಕ್ತದ ರುಚಿ ಸಿಕ್ಕಿದ್ದರಿಂದ ಬೇರೆ ದೇವಸ್ಥಾನಗಳ ಮೇಲೂ ಆಕ್ರಮಣ ಸಾಧ್ಯತೆ

ಹಾಸನ: ಅಡುಗೆ ವಿಚಾರಕ್ಕೆ ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮುಂದಿನ ಸುದ್ದಿ
Show comments