Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಎಂದು ಮರುನಾಮಕರಣ: ಡಿಸಿಎಂ

webdunia
ಬುಧವಾರ, 7 ಜುಲೈ 2021 (13:50 IST)
ಸಾರಿಗೆ ನಿಗಮಗಳ ಅಧಿನಿಯಮ 1950 ರ  ( ಕೇಂದ್ರ ಅಧಿನಿಯಮ 64) ಕಲಮ್  ಮೂರರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ತಕ್ಷಣದಿಂದ ಜಾರಿಗೆ ಬರುವಂತೆ  ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.
 
 ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾದ ನಂತರ ಈಶಾನ್ಯ ಸಾರಿಗೆಗೂ ಈ ರೀತಿ ಮರು ನಾಮಕರಣ ಮಾಡಬೇಕೆಂದು ಬಹುದಿನಗಳ ಬೇಡಿಕೆ ಸ್ಥಳೀಯರಿಂದ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶ್ರೀ ಸವದಿ ಅವರು ತಿಳಿಸಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸಂಪುಟದಲ್ಲಿ ರಾಜ್ಯಕ್ಕೆ ಒಂದೇ ಸ್ಥಾನ?