Publish Date: Mon, 28 Feb 2022 (15:37 IST)
Updated Date: Mon, 28 Feb 2022 (18:39 IST)
ನಟ ಪುನೀತ್ ರಾಜ್ಕುಮಾರ್ ಹೆಸರಿನ ಉಪಗ್ರಹ ಸೆಪ್ಟೆಂಬರ್ ಅಥವಾ ಅಕ್ಟೋಬರ್ನಲ್ಲಿ ಉಡಾವಣೆಯಾಗಲಿದೆ ಎಂದು ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪುನೀತ್ ರಾಜ್ಕುಮಾರ್ ಹೆಸರಿನ ಉಪಗ್ರಹ ಸೆಪ್ಟೆಂಬರ್ ಅಥವಾ ಅಕ್ಟೋಬರ್ನಲ್ಲಿ ಉಡಾವಣೆಯಾಗಲಿದೆ.
ಉಪಗ್ರಹ 1.90 ಕೋಟಿ ರೂ. ವೆಚ್ಚದಲ್ಲಿ ತಯಾರಾಗುತ್ತಿದೆ. ಇದು 1.5 ಕೆಜಿ ತೂಕ ಇರಲಿದೆ ಎಂದರು. ಇದೇ ವೇಳೆ ಉಕ್ರೇನ್ನಿಂದ ಬಂದ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ವ್ಯಾಸಂಗ ಮಾಡಲು ಅವಕಾಶ ಮಾಡಿಕೊಡುವ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಕೇಂದ್ರ ಸರ್ಕಾರದ ಜೊತೆ ಮಾತಾಡಬೇಕಾಗುತ್ತೆ. ಮೆಡಿಕಲ್ ಕೋರ್ಸ್ಗಳು ಮಾಡೋದು ಕಷ್ಟ. ಬೇರೆ ಕೋರ್ಸ್ಗೆ ಸಮಸ್ಯೆಯಾಗಲ್ಲ. ಆದರೂ ನಿಯಮಗಳ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ, ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಯೋಚಿಸುತ್ತೇವೆ ಎಂದು ಹೇಳಿದರು