Publish Date: Sat, 15 Sep 2018 (09:44 IST)
Updated Date: Sat, 15 Sep 2018 (09:47 IST)
ಬೆಳಗಾವಿ: ಬೆಳಗಾವಿಯಲ್ಲಿ ಸದ್ಯಕ್ಕೆ ಉಂಟಾಗಿರುವ ಬಂಡಾಯಕ್ಕೂ ತಮಗೂ ಸಂಬಂಧವಿಲ್ಲ ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ ಕಾಂಗ್ರೆಸ್ ನ ಬಂಡಾಯ ರಾಜ್ಯ ಸಮ್ಮಿಶ್ರ ಸರ್ಕಾರಕ್ಕೇ ಆಪತ್ತು ತಂದಿದೆ. ಅತ್ತ ಜಾರಕಿಹೊಳಿ ಸಹೋದರರು ಬಿಜೆಪಿ ಸೇರುತ್ತಾರೆ ಎಂಬಿತ್ಯಾದಿ ವದಂತಿಗಳಿದ್ದವು. ಇದರ ಬಗ್ಗೆ ಸತೀಶ್ ಜಾರಕಿಹೊಳಿ ಮಾಧ್ಯಮಗಳ ಮುಂದೆ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ನಲ್ಲಿ ಯಾವ ಭಿನ್ನಮತವೂ ಇಲ್ಲ. ಯಾರೂ ಬಿಜೆಪಿಗೆ ಹೋಗುತ್ತಿಲ್ಲ. ಸಮಸ್ಯೆಗಳೆಲ್ಲಾ ಬಗೆಹರಿದಿದೆ. ಈಗ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳಿಗೂ ನನಗೂ ಸಂಬಂಧವಿಲ್ಲ. ನಮಗೆ ಹೈಕಮಾಂಡ್ ಎಚ್ಚರಿಕೆ ಕೊಟ್ಟಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.