ಹಾಡಿನ ಮೂಲಕ ರಮೇಶ್ ಜಾರಕಿಹೊಳಿಗೆ ತಿವಿದ ಸತೀಶ್ ಜಾರಕಿಹೊಳಿ

ಬುಧವಾರ, 9 ಅಕ್ಟೋಬರ್ 2019 (12:09 IST)
ಬೆಳಗಾವಿ : ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕ್ಷೇತ್ರವಾದ ಗೋಕಾಕ್ ನಗರದಲ್ಲಿ ನಡೆದ ಭಾರೀ ಅವ್ಯವಹಾರದ ಬಗ್ಗೆ ಸತೀಶ್ ಜಾರಕಿಹೊಳಿ ಹಾಡಿನ ಮೂಲಕ ಹೇಳಿ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ.
ಗೋಕಾಕ್ ನಗರ ಮತ್ತು ತಾಲೂಕಿನಲ್ಲಿ ನೆರೆ ಬಂದಾಗ ಗೋಕಾಕ್ ನಗರಸಭೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಸತೀಶ್ ಜಾರಕಿಹೊಳಿ ಅದನ್ನು “ಕಥೆಯ ಕೇಳಿರಣ್ಣ ದ್ರೋಹದ ಕಥೆಯ ಕೇಳಿರಣ್ಣ” ಎಂಬ ಹಾಡಿನ ಮೂಲಕ ತಿಳಿಸಿದ್ದಾರೆ.


ಅಲ್ಲದೇ ಮಂಗಳವಾರ ನಡೆದ ಗೋಕಾಕ್ ಪಟ್ಟಣದ ಸ್ವಚ್ಛತಾ ಕಾರ್ಯಕ್ರಮದ ಅಭಿನಂದನಾ ಕಾರ್ಯಕ್ರಮದಲ್ಲಿ, ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ, ನಗರ ಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೊತ್ವಾಲ್, ನಾವು ಯಾವ ಹಾಡು ಬಿಡುಗಡೆಗೊಳಿಸಬೇಕು ಎಂಬ ಚಿಂತೆಯಲ್ಲಿದ್ದಾರೆ ಎಂದು ಹೇಳುವುದರ ಮೂಲಕ ಸತೀಶ್ ಜಾರಕಿಹೊಳಿ ಸಹೋದರ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ನಾಳೆಯಿಂದ ನಡೆಯಲಿರುವ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಿಂದ ರಣತಂತ್ರ