Select Your Language

Notifications

webdunia
webdunia
webdunia
webdunia

ಸಿಎಂ ಜತೆಗೆ ಕೆಪಿಸಿಸಿ ಅಧ್ಯಕ್ಷನಾಗುವ ಇಂಗಿತ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ

Chief Minister Siddaramaiah Post, Minister Sathish Jarakiholi, KPCC President Post,

Sampriya

ಹಾವೇರಿ , ಶುಕ್ರವಾರ, 29 ನವೆಂಬರ್ 2024 (16:34 IST)
Photo Courtesy X
ಹಾವೇರಿ: ಇದೀಗ ಮತ್ತೇ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಮತ್ತೇ ಚರ್ಚೆಗೆ ಬಂದಿದೆ. ಇದಕ್ಕೆ ಕಾರಣ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಸಿಎಂ ಆಗಲಿಕ್ಕೆ ಆಸೆ ಇದೆ, ಅಧ್ಯಕ್ಷ ಆಗಲಿಕ್ಕೆ ಆಸೆ ಇದೆ, ಮಂತ್ರಿ ಆಗಲಿಕ್ಕೂ ಆಸೆ ಇದೆ, ಆದ್ರೆ ಅಂತಿಮವಾಗಿ ಪಕ್ಷ ತೀರ್ಮಾನ ಮಾಡಲಿ. ಅದು ಪಕ್ಷದ ತೀರ್ಮಾನವೇ ಅಂತಿಮವಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ  ಹೇಳಿದ್ದಾರೆ.

ಈ ಹಿಂದೆ ಸಿಎಂ ಆಗ್ತಾರೆ ಅಂತ ಹೇಳಿ ಹೆಸರು ಓಡಾಡ್ತು. ಈಗ ಅಧ್ಯಕ್ಷ ಆಗ್ತಾರೆ ಅಂತಾ ಹೆಸರು ಓಡಾಡ್ತಾ ಇದೆ. ನಮ್ಮ ಉತ್ಸಾಹ ಅಷ್ಟೆ. ಅಂತಿಮವಾಗಿ ಪಕ್ಷ ತೀರ್ಮಾನ ಮಾಡಬೇಕು. ನಾವೆಲ್ಲಾ ಕಾದು ನೋಡಬೇಕು ಅಷ್ಟೆ. ಈ ವಿಚಾರವಾಗಿ ನಾನು ಯಾವುದೇ ರೀತಿ ಒತ್ತಡ ಹಾಕಿಲ್ಲ. ಚುನಾವಣೆಯಲ್ಲಿ ಗೆಲ್ಲಿಸಿದ್ದೀವಿ, ತೃಪ್ತಿ ಇದೆ. ಮಂತ್ರಿಯಾಗಿ ಕೆಲಸ ಮಾಡ್ತಾ ಇದ್ದೀವಿ, ತೃಪ್ತಿ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಧ್ಯಕ್ಷ ಹುದ್ದೆ ಅಹಿಂದ ನಾಯಕರಿಗೆ ಕೊಡಬೇಕು ಅಂತಾ ಒತ್ತಾಯ ಇದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಆದರೆ ಅಂತಿಮವಾಗಿ ವರಿಷ್ಠರು ತೀರ್ಮಾನ ಮಾಡಬೇಕು. ಯಾರಿಗೆ ಕೊಡಬೇಕು? ಯಾಕೆ ಕೊಡಬೇಕು? ಅದರಿಂದ ಆಗುವ ಲಾಭ ಏನು ಎಂಬ ಬಗ್ಗೆ ಇದೆಲ್ಲಾ ಚರ್ಚೆ ಮಾಡಿ ಅಂತಿಮವಾಗಿ ತೀರ್ಮಾನ ಮಾಡುತ್ತಾರೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ ಮುಂದಿಟ್ಟ ಬೇಡಿಕೆಗಳು ಹೀಗಿವೆ