Select Your Language

Notifications

webdunia
webdunia
webdunia
webdunia

ದೆಹಲಿ ತಲುಪಿದ ಬೆಳಗಾವಿ ಕಾಂಗ್ರೆಸ್ ಬಿಕ್ಕಟ್ಟು: ಸತೀಶ್ ಜಾರಕಿಹೊಳಿಯಿಂದ ರಾಹುಲ್ ಭೇಟಿ

ದೆಹಲಿ ತಲುಪಿದ ಬೆಳಗಾವಿ ಕಾಂಗ್ರೆಸ್ ಬಿಕ್ಕಟ್ಟು: ಸತೀಶ್ ಜಾರಕಿಹೊಳಿಯಿಂದ ರಾಹುಲ್ ಭೇಟಿ
ನವದೆಹಲಿ , ಮಂಗಳವಾರ, 23 ಮೇ 2017 (12:52 IST)
ಮಾಜಿ ಸಚಿವ ಸತೀಶ್ ಜಾರಕಿಹೊಳಿ ಇಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
 
ಬೆಳಗಾವಿ ಕಾಂಗ್ರೆಸ್ ಘಟಕದ ಬಿಕ್ಕಟ್ಟು ಕುರಿತಂತೆ ರಾಹುಲ್ ಗಾಂಧಿಯವರೊಂದಿಗೆ ಚರ್ಚೆ ನಡೆಸಿ, ತಮ್ಮ ಸ್ವಂತ ಕ್ಷೇತ್ರವಾದ ಯಮಕನಮರಡಿ ವಿಧಾನಸಭಾ ಕ್ಷೇತ್ರದಿಂದ ಲಖನ್ ಜಾರಕಿಹೊಳಿ ಸ್ಪರ್ಧೆಗೆ ಸಿದ್ದತೆ ನಡೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಒಂದು ವೇಳೆ, ಯಮಕನಮರಡಿ ವಿಧಾನಸಭಾ ಕ್ಷೇತ್ರದಿಂದ ಲಖನ್ ಸ್ಪರ್ಧಿಸಿದಲ್ಲಿ ಅದನ್ನು ತಾವು ವಿರೋಧಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗುತ್ತಿದೆ.
 
ನಿನ್ನೆ ಬೆಳಗಾವಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಜಾರಕಿಹೊಳಿ ಸಹೋದರರನ್ನು ತರಾಟೆಗೆ ತೆಗೆದುಕೊಂಡಿದ್ದನ್ನು ಸ್ಮರಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡ ಪರ ಸಂಘಟನೆ ಕಾರ್ಯಕರ್ತನ ಮೇಲೆ ನೈಜಿರಿಯಾ ಪ್ರಜೆಗಳಿಂದ ಹಲ್ಲೆ