ಹೇಳಿಕೆಯನ್ನು ಹಿಂಪಡೆದ ಸತೀಶ್ ಜಾರಕಿಹೊಳಿ

Webdunia
ಗುರುವಾರ, 10 ನವೆಂಬರ್ 2022 (09:25 IST)
ಬೆಳಗಾವಿ : ಹಿಂದೂ ಶಬ್ದ ಬಗ್ಗೆ ನೀಡಿದ್ದ ಹೇಳಿಕೆಯು ವಿವಾದವಾಗುತ್ತಿದ್ದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದು ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ.

ನಿಪ್ಪಾಣಿ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ಹಿಂದೂ ಶಬ್ದದ ಬಗ್ಗೆ ನೀಡಿದ್ದ ಮಾತು ವಿವಾದಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ಪತ್ರ ಬರೆದಿರುವ ಅವರು,

ನಾನು ಮಾತನಾಡಿದ್ದ ಹಿಂದೂ ಶಬ್ದದದ ಬಳಕೆ ಕುರಿತು ನನ್ನ ತೇಜೋವಧೆ ಮಾಡಲಾಗುತ್ತಿದೆ. ಅಲ್ಲದೇ ಅದನ್ನು ತಿರುಚಿ ಅಪಪ್ರಚಾರಗೊಳಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ್ದ ಆ ಹೇಳಿಕೆ ಹಿಂದೆ ಪಡೆಯುತ್ತಿದ್ದೇನೆ.

ಆ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ಪತ್ರ ಬರೆದ ಜಾರಕಿಹೊಳಿ, ತಮ್ಮ ಹೇಳಿಕೆ ಬಗ್ಗೆ ತನಿಖಾ ಸಮಿತಿ ರಚಿಸುವಂತೆ ಸಿಎಂಗೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದರೋಡೆಗೆ ಬಂದವರನ್ನು ಈ ಇಬ್ಬರು ಹೆಣ್ಣು ಮಕ್ಕಳು ಹಿಮ್ಮೆಟ್ಟಿಸಿದ್ದು ಹೇಗೆ ನೋಡಿ Video

Video: ನಮ್ಮ ಮೆಟ್ರೋವನ್ನು ಬೆಡ್ ರೂಂ ಮಾಡಿಕೊಂಡ ಯುವ ಜೋಡಿ: ಅಸಭ್ಯ ವರ್ತನೆ ವಿಡಿಯೋ ವೈರಲ್

ಟೌನ್‍ಶಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದೇ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆ ಗಮನ ಕೊಡಿ: ವಿಜಯೇಂದ್ರ

ತಿಂಗಳಿಗೆ 90 ಸಾವಿರ ದುಡಿತೀನಿ ಸಾರ್.. ಕ್ಯಾಬ್ ಡ್ರೈವರ್ ಹೇಳಿದ ಕತೆ ಕೇಳಿ ಗ್ರಾಹಕ ಫುಲ್ ಶಾಕ್ Video

ರಾಹುಲ್ ಗಾಂಧಿ 20 ದಿನದಿಂದ ವಿದೇಶದಲ್ಲಿದ್ರು, ಎಲ್ಲಿ ಹೋಗಿದ್ರು ಇಷ್ಟು ದಿನ ಎಲ್ಲಿದ್ರು ಕೇಳಿದ್ರಾ: ಬಿಜೆಪಿ ಪ್ರಶ್ನೆ

ಮುಂದಿನ ಸುದ್ದಿ
Show comments