Select Your Language

Notifications

webdunia
webdunia
webdunia
webdunia

ಡಿಕೆ ಶಿವಕುಮಾರ್ ಸಿಎಂ ಆದರೆ ಸತೀಶ್ ಜಾರಕಿಹೊಳಿಗೆ ಈ ಸ್ಥಾನವಂತೂ ಖಚಿತ

Satish Jarakiholi
ಬೆಂಗಳೂರು: ಡಿಕೆ ಶಿವಕುಮಾರ್ ಸಿಎಂ ಆದರೆ ಸತೀಶ್ ಜಾರಕಿಹೊಳಿಗೆ ಇದೊಂದೇ ಷರತ್ತು. ತಮಗೆ ಸಿಗಬೇಕಾದ ಸ್ಥಾನದ ಬಗ್ಗೆ ಸತೀಶ್ ಜಾರಕಿಹೊಳಿ ಈಗ ಹೈಕಮಾಂಡ್ ಮುಂದೆ ಬೇಡಿಕೆಯಿಟ್ಟಿದ್ದಾರೆ ಎನ್ನಲಾಗಿದೆ.

ಡಿಕೆ ಶಿವಕುಮಾರ್ ಈಗ ಡಿಸಿಎಂ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೂ ಹೊಂದಿದ್ದಾರೆ. ಈ ಹಿಂದೆ ಸಿಎಂ ಬದಲಾವಣೆ ಪ್ರಸ್ತಾಪ ಬಂದಾಗಲೆಲ್ಲಾ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತಮಗೆ ನೀಡುವಂತೆ ಹೈಕಮಾಂಡ್ ಮುಂದೆ ಬೇಡಿಕೆಯಿಡುತ್ತಲೇ ಇದ್ದರು.

ಇದೀಗ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು ಡಿಕೆ ಶಿವಕುಮಾರ್ ಸಿಎಂ ಆಗುವುದು ಬಹುತೇಕ ನಿಚ್ಚಳವಾಗಿದೆ. ಈಗಾಗಲೇ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಅಧಿಕಾರ ಹಂಚಿಕೆ ಕುರಿತಂತೆ ಭಾರೀ ಚರ್ಚೆ ನಡೆಯುತ್ತಿದೆ.

ಇದರ ನಡುವೆ ಈಗ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗುವುದು ಬಹುತೇಕ ಫಿಕ್ಸ್ ಎನ್ನಲಾಗುತ್ತಿದೆ. ಡಿಕೆ ಶಿವಕುಮಾರ್ ಸಿಎಂ ಆದರೆ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಲಿದ್ದಾರೆ. ಹೀಗಾಗಿ ಅವರಂತೆಯೇ ತನಗೂ ಒಂದು ಸಚಿವ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಸತೀಶ್ ಜಾರಕಿಹೊಳಿ ಬೇಡಿಕೆ ಮುಂದಿಟ್ಟಿದ್ದಾರೆ. ಆದರೆ ಇದಕ್ಕೆ ಹೈಕಮಾಂಡ್ ಒಪ್ಪುತ್ತದೆಯೇ ಅಥವಾ ಒಬ್ಬರಿಗೆ ಒಂದೇ ಸ್ಥಾನ ಎಂಬ ನಿಯಮ ತರುತ್ತದೆಯೇ ನೋಡಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈನ ಡಾಬಾದಲ್ಲಿ ರೊಟ್ಟಿಗೆ ಉಗುಳಿ ಗ್ರಾಹಕರಿಗೆ ನೀಡುತ್ತಿದ್ದ ಭೂಪ ಅರೆಸ್ಟ್: Video