Select Your Language

Notifications

webdunia
webdunia
webdunia
webdunia

ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಿರುವ ಸತೀಶ್ ಜಾರಕಿಹೊಳಿ ಏನು ತಪ್ಪು ಮಾಡಿಲ್ಲ: ಡಿಕೆ ಶಿವಕುಮಾರ್‌

DK Shivkumar
Photo Credit X
ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲಿನ ಇಡಿ ದಾಳಿ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ,  ಜಾರಕಿಹೊಳಿ ಅವರು ಏನು ತಪ್ಪು ಮಾಡಿಲ್ಲ, ಕಾನೂನು ಚೌಕಟ್ಟಿನಲ್ಲಿ ವ್ಯವಹಾರ ಮಾಡಿದ್ದಾರೆ  ಎಂದು ಸಮರ್ಥಿಸಿಕೊಂಡರು. 

ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು,  ಅವರು ನನ್ನ ಸಹೋದ್ಯೋಗಿ. ಅವರು ಏನು ತಪ್ಪು ಮಾಡಿಲ್ಲ, ಕಾನೂನು ಚೌಕಟ್ಟಿನಲ್ಲಿ ವ್ಯವಹಾರ ಮಾಡಿದ್ದಾರೆ. 

ಹೊರಗಡೆ ಹೋಗಬಾರದು, ವ್ಯವಹಾರ ಮಾಡಬಾರದು ಅಂತ ಎಲ್ಲಿದೆ? ಇದೆಲ್ಲ ರಾಜಕಾರಣ. ಇನ್ನೂ ಮುಂದಿನ ದಿನಗಳಲ್ಲಿ ಮೂರು ನಾಲ್ಕು ಮಂದಿಯ ಮೇಲೆ ಇಡಿ ದಾಳಿ ನಡೆಯುವ ಸಾಧ್ಯತೆಯಿದೆ. ಇದೊಂದು  ಕಾಂಗ್ರೆಸ್  ಪಾರ್ಟಿನ ಟ್ರ್ಯಾಪ್‌ ಮಾಡೋದಕ್ಕೆ ತಯಾರಿ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ 

ಬಿಜೆಪಿಯವರ  ಮೇಲೆಲ್ಲೂ ಕೂಡ ದಾಳಿ ಮಾಡುತ್ತಿಲ್ಲ. ಸಮುದಾಯ ಮಾತ್ರ ಅಲ್ಲ. ಇಡೀ ಪಕ್ಷವನ್ನೇ ಟಾರ್ಗೆಟ್ ಮಾಡಲಾಗಿದೆ. ವಂದೇ ಮಾತರಂ ಗೀತೆ ಮೊಟಕು ಮಾಡಿರೋ ವಿಚಾರವಾಗಿ, ವಂದೇ ಮಾತರಂ  ಬಗ್ಗೆ ನಮ್ಮ ಪಕ್ಷದ ಸ್ಟ್ಯಾಂಡ್ ಸ್ಪಷ್ಟವಾಗಿದೆ. ಅವರು ರಾಜಕೀಯ ಮಾಡ್ತಿದ್ದಾರೆ ಅಷ್ಟೇ ಎಂದು ಹೇಳಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿ, ಮೂವರು ಮಕ್ಕಳನ್ನು ಇಟ್ಟಿಗೆಯಿಂದ ಬಡಿದು ಕೊಲೆ ಮಾಡಿದ ವ್ಯಕ್ತಿ