Select Your Language

Notifications

webdunia
webdunia
webdunia
webdunia

ಸತೀಶ್ ಜಾರಕಿಹೊಳಿ ನಮ್ಮ ಸಿಎಂ ಎಂದವರಾರು?

ಜಾರಕಿಹೊಳಿ
ಮೈತ್ರಿ ಸರಕಾರದಲ್ಲಿ ರಾಜಕೀಯ ಬೆಳವಣಿಗೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಲೋಕಸಭೆ ಚುನಾವಣೆಗೆ ಒಂದೆಡೆ ದಿನಗಣನೆ ಆರಂಭಗೊಂಡಿದ್ದರೆ, ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ನಮ್ಮ ಸಿಎಂ ಎಂದು ಹೇಳಿಕೊಳ್ಳುತ್ತಿರುವುದು ಚರ್ಚೆಗೆ ಕಾರಣವಾಗಿದೆ.

ದೋಸ್ತಿ ಸರ್ಕಾರದಲ್ಲಿ ಪೊಲಿಟಿಕಲ್ ವಾರ್ ಹೆಚ್ಚಾಗುತ್ತಲೇ ಸಾಗುತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಬೆಂಬಲಿಗರು  ಸಿಎಂ ಅಭಿಯಾನ ಶುರುವಿಟ್ಟುಕೊಂಡಿದ್ದಾರೆ.

ನಮ್ಮ ಸಿಎಂ ಸತೀಶ್ ಜಾರಕಿಹೊಳಿ ಹೆಸರಿನ ಅಭಿಯಾನ ಆರಂಭಿಸಿದ್ದು, ಹಲವು ಚರ್ಚೆಗೆ ಕಾರಣವಾಗಿದೆ.
ಕಲಬುರಗಿಯ ಕನ್ನಡ ಭವನದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದಲಿತ ಸೇನೆ ಜಿಲ್ಲಾ ಘಟಕ ಹಮ್ಮಿಕೊಂಡಿರುವ ಕಾರ್ಯಕ್ರಮ ಇದೀಗ ಚರ್ಚೆಗೆ ನಾಂದಿ ಹಾಡಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಮಾನವೀಯತೆ ಮೆರೆದ ಸಚಿವ!