ನವದೆಹಲಿ: ಒಂದೆಡೆ ರಾಜ್ಯ ಕಾಂಗ್ರೆಸ್ ನೊಳಗೆ ನಾಯಕತ್ವ ಬದಲಾವಣೆ ಕುರಿತು ಮುಸಕಿನ ಗುದ್ದಾಟ ನಡೆಯುತ್ತಿದ್ದರೆ ಇತ್ತ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಎಚ್ ಡಿ ಕುಮಾರಸ್ವಾಮಿ, ಎಚ್ ಡಿ ದೇವೇಗೌಡರನ್ನು ಭೇಟಿ ಮಾಡಿರುವುದು ಕಾಂಗ್ರೆಸ್ ಒಳಗೇ ಹಲ್ ಚಲ್ ಸೃಷ್ಟಿಸಿದೆ.
ರಾಜ್ಯದಲ್ಲಿ ಒಂದೆಡೆ ಡಿಕೆ ಶಿವಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆ ವಿವಾದ ಸೃಷ್ಟಿಸಿದ್ದರೆ ಇತ್ತ ದೆಹಲಿಯಲ್ಲಿ ಸತೀಶ್ ಜಾರಕಿಹೊಳಿ ಜೆಡಿಎಸ್ ಧುರೀಣರಾದ ಎಚ್ ಡಿ ಕುಮಾರಸ್ವಾಮಿ ಮತ್ತು ದೇವೇಗೌಡರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ.
ಈ ಭೇಟಿಯ ಉದ್ದೇಶವೇನೆಂದ ಶುಕ್ರವಾರ ಹೇಳುವೆ. ಇನ್ನೂ ಕೆಲವು ನಾಯಕರನ್ನು ದೆಹಲಿಯಲ್ಲಿ ಭೇಟಿ ಮಾಡುವುದಿದೆ ಎಂದು ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಹೇಳಿದ್ದಾರೆ. ರಾಜ್ಯದಲ್ಲಿ ಹನಿಟ್ರ್ಯಾಪ್, ಸಂವಿಧಾನ ಬದಲಾವಣೆ ವಿವಾದ, ಮುಸ್ಲಿಂ ಮೀಸಲಾತಿ ವಿಚಾರಗಳು ಗದ್ದಲ ಸೃಷ್ಟಿಸಿರುವಾಗ ಸತೀಶ್-ಜೆಡಿಎಸ್ ನಾಯಕರ ಭೇಟಿ ಕುತೂಹಲ ಮೂಡಿಸಿದೆ.
ಹನಿಟ್ರ್ಯಾಪ್ ಬಗ್ಗೆ ಮುಖ್ಯವಾಗಿ ಚರ್ಚೆ ನಡೆದಿದೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಮೇಲೆ ತೂಗುಗತ್ತಿ ಇರುವಾಗ ಅವರ ಪರಮ ಎದುರಾಳಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.