ಸವದಿ ಪಕ್ಷ ಬಿಟ್ಟು ಹೋಗಿದ್ದು ಪೀಡೆ ತೊಲಗಿದಂತಾಗಿದೆ : ರಮೇಶ್ ಜಾರಕಿಹೊಳಿ

Webdunia
ಶನಿವಾರ, 15 ಏಪ್ರಿಲ್ 2023 (08:52 IST)
ಚಿಕ್ಕೋಡಿ : ಲಕ್ಷ್ಮಣ ಸವದಿ ಪಕ್ಷ ಬಿಟ್ಟು ಹೋಗಿದ್ದು ಪೀಡೆ ತೊಲಗಿದಂತಾಗಿದೆ ಎಂದು ಸವದಿ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏಕವಚನದಲ್ಲಿ ಕಿಡಿಕಾರಿದರು.
 
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತಾನಾಡಿದ ಅವರು, ಸೋತವರನ್ನು ಪಕ್ಷ ಡಿಸಿಎಂ ಮಾಡಿತ್ತು. ಆದರೆ ಅವನು ಪಕ್ಷ ನಿಷ್ಠೆ ತೋರಿಸಿಲ್ಲ. ಬದಲಾಗಿ ಇಂದು ನಮ್ಮನ್ನು ಬಿಟ್ಟು ಹೋಗಿದ್ದಾನೆ, ನಮಗೆ ಒಳ್ಳೆದಾಗಿದೆ.

ರಮೇಶ್ ಜಾರಕಿಹೊಳಿ ಮತ್ತೆ ಕಾಂಗ್ರೆಸ್ ಹೋಗುತ್ತಾನೆ ಎಂಬ ಯೋಚನೆ ಸವದಿ ತಲೆಯಲ್ಲಿ ಇತ್ತು. ಆದರೆ ನನಗೆ ಮಂತ್ರಿ ಸ್ಥಾನವಿಲ್ಲದಿದ್ದರೂ ನಾನು ಪಕ್ಷದಲ್ಲೇ ಇದ್ದೇನೆ, ಉದ್ದ ಅಂಗಿ ಹಾಕಿರುವವನು ಪಕ್ಷದಿಂದ ಹೊರಗೆ ಹೋಗಿರುವುದು ನನಗೆ ಸಂತೋಷ ತಂದಿದೆ ಎಂದರು.

ಒಂದೂವರೆ ವರ್ಷ ಸವದಿ ಮಂತ್ರಿ ಇದ್ದರೂ ಅಥಣಿ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗಲಿಲ್ಲ. ಸವದಿಯನ್ನು ವಿಶೇಷ ವಿಮಾನದಲ್ಲಿ ಡಿಕೆಶಿ ಕರೆದುಕೊಂಡು ಹೋಗಿದ್ದಾನೆ. ಡಿಕೆಶಿ ಕುತಂತ್ರಿ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭ್ರಷ್ಟಾಚಾರ ನಮ್ಮ ಕಾಲದ್ದಾ, ನಿಮ್ಮ ಕಾಲದ್ದಾ: ಸಿದ್ದರಾಮಯ್ಯಗೆ ದಾಖಲೆ ನೀಡಿದ ಆರ್ ಅಶೋಕ್

ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪಾಕಿಸ್ತಾನ ಸಂಸತ್ತಿನೊಳಗೆ ಎಂಟ್ರಿ ಕೊಟ್ಟ ಕತ್ತೆ: ಫುಲ್ ಕಾಮಿಡಿ ವಿಡಿಯೋ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ಮುಂದಿನ ಸುದ್ದಿ
Show comments