Publish Date: Tue, 27 Dec 2022 (14:55 IST)
Updated Date: Tue, 27 Dec 2022 (14:57 IST)
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಧೇಯಕ-2022 ನ್ನು ಸರ್ಕಾರ ಮಂಡಿಸಿತ್ತು. ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದ ಬಳಿಕ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ವಿಧೇಯಕ ಕುರಿತು ವಿವರಣೆ ನೀಡಿದರು. ಬಳಿಕ ಧ್ವನಿಮತದಿಂದ ಅಂಗೀಕರಿಸಲಾಗಿದೆ.
ಇದೀಗ ರಾಜ್ಯ ಸರ್ಕಾರವು ಮಸೂದೆಯನ್ನು ಕೇಂದ್ರಕ್ಕೆ ಕಳುಹಿಸಿಕೊಟ್ಟು ಶೆಡ್ಯೂಲ್-9ಕ್ಕೆ ಸೇರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಿದೆ. ಸಂಸತ್ ನಲ್ಲಿ ಇದು ಅಂಗೀಕಾರವಾದ ಬಳಿಕ ಅಧಿಕೃತವಾಗಿ ಕಾನೂನಾಗಿ ರಾಜ್ಯದಲ್ಲಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಅಂಗೀಕಾರವಾದ ಬಳಿಕ ತರ ವಿಧಾನ ಪರಿಷತ್ ನಲ್ಲಿ ವಿಧೇಯಕ ಮಂಡಿಸಲಾಗುತ್ತಿದೆ. ನಾಗಮೋಹನ್ ದಾಸ್ ಅವರು ನೀಡಿದ್ದ ವರದಿಯಂತೆ ರಾಜ್ಯ ಸರ್ಕಾರ ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳವನ್ನು ಮಾಡಿದೆ.