Webdunia - Bharat's app for daily news and videos

Install App

ಹೆಣ್ಣುಮಕ್ಕಳ ಪ್ರೋತ್ಸಾಹಧನದ ಯೋಜನೆ ಸ್ಥಗಿತ

Webdunia
ಶುಕ್ರವಾರ, 24 ನವೆಂಬರ್ 2017 (10:48 IST)
ಬೆಂಗಳೂರು: 
ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಹೆಚ್ಚಿಸುವ ಸಲುವಾಗಿ ಒಂದನೇ ತರಗತಿ ಓದುವ ಹೆಣ್ಣು ಮಕ್ಕಳಿಗೆ ಪ್ರತಿ ದಿನದ ಹಾಜರಾತಿಗೆ ನೀಡುವ ಎರಡು ರೂಪಾಯಿ ಪ್ರೋತ್ಸಾಹ ಧನದ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಸದಸ್ಯೆ ತಾರಾ ಅನುರಾಧ ಅವರು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ವರ್ಷಾಂತ್ಯದಲ್ಲಿ ಪ್ರೋತ್ಸಾಹಧನ ನೀಡುತ್ತಿದ್ದರಿಂದ ಪ್ರೋತ್ಸಾಹ ನೀಡಿದಂತೆ ಆಗುತ್ತಿಲ್ಲ ಎಂದು ಹೇಳಿದ್ದಾರೆ.

2013-14ನೇ ಸಾಲಿನಲ್ಲಿ ಜಾರಿಗೆ ತಂದ ಯೋಜನೆಯಾಗಿದ್ದು, ಯೋಜನೆ ಅನುಷ್ಠಾನ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ದೂರುಗಳು ಬರುತ್ತಿದ್ದವು. ಪ್ರೋತ್ಸಾಹಧನ ನೀಡುವ ಜವಾಬ್ದಾರಿಯನ್ನು ಶಾಲಾಭಿವೃದ್ಧಿ ಸಮಿತಿ ವಹಿಸಲಾಗಿತ್ತು. ಅನುದಾನ ಬಳಕೆಯ ವರದಿಗಳು ಬರುತ್ತಿರಲಿಲ್ಲ ಎಂದು ವಿವರಿಸಿದರು.

ಯೋಜನೆಯನ್ನು ಪಾರದರ್ಶಕವಾಗಿ ನಿರ್ವಹಣೆ ಮಾಡುವ ಅಗತ್ಯವಿದ್ದು, ಅದಕ್ಕಾಗಿ ಈ ಯೋಜನೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಮುಂದಿನ ಸುದ್ದಿ
Show comments