Select Your Language

Notifications

webdunia
webdunia
webdunia
webdunia

ಶಾಲಾ ವಾಹನ ಬಸ್ ಡಿಕ್ಕಿ: ಇಬ್ಬರು ಮಕ್ಕಳು ಸಾವು, ಮೂವರ ಕಾಲು ತುಂಡು, 15 ವಿದ್ಯಾರ್ಥಿಗಳಿಗೆ ಗಾಯ

accident

Sampriya

ರಾಯಚೂರು , ಗುರುವಾರ, 5 ಸೆಪ್ಟಂಬರ್ 2024 (14:24 IST)
Photo Courtesy X
ರಾಯಚೂರು: ತಾಲ್ಲೂಕಿನ ‌ಕಪಗಲ್ ಗ್ರಾಮದ ಸಮೀಪ ಗುರುವಾರ ಶಾಲಾ ವಾಹನ ಹಾಗೂ ಸಾರಿಗೆ ಸಂಸ್ಥೆಯ ಬಸ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿ, 15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತ ವಿದ್ಯಾರ್ಥಿಗಳನ್ನು ಲೊಯಲ್‌ ಶಾಲೆಯ ಸಮರ್ಥ ಅಮರೇಶ (7) ಹಾಗೂ ಶ್ರೀಕಾಂತ ಮಾರೇಶ (12) ಎಂದು ಗುರುತಿಸಲಾಗಿದೆ. ಇನ್ನೂ ಅಪಘಾತದ ತೀವ್ರತೆಗೆ ಒಬ್ಬ ಬಾಲಕ ಹಾಗೂ ಚಾಲನಕನ ಸ್ಥಿತಿ ಗಂಭೀರವಾಗಿದೆ. ಭೀಕರ ಅಪಘಾತದಲ್ಲಿ ಮೂರು ಮಕ್ಕಳ ಕಾಲುಗಳು ತುಂಡಾಗಿವೆ.

ಶಾಲಾ ಮಕ್ಕಳನ್ನು ಕರೆದುಕೊಂಡು ಮಾನ್ವಿಯ ಲೊಯೋಲ್ ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಮೂವರು ಮಕ್ಕಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ನಿತಿಶ್ ಕೆ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಕ್ಕಳ ಪಾಲಕರಿಗೆ ತಲಾ ₹ 5 ಲಕ್ಷ ಪರಿಹಾರ ಹಾಗೂ ರಸ್ತೆ ಸಾರಿಗೆ ಸಂಸ್ಥೆಯಿಂದಲೂ ಪರಿಹಾರ ಕೊಡುವ ಭರವಸೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ನಿತಿಶ್ ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

PSI ಪರಶುರಾಮ್ ಪ್ರಕರಣದ ವರದಿ ಕೇಳಿದ ಕೇಂದ್ರ: ರಾಜ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ