Publish Date: Fri, 18 Feb 2022 (17:32 IST)
Updated Date: Fri, 18 Feb 2022 (17:35 IST)
ಶಾಲಾ ಆಡಳಿತ ಮಂಡಳಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿಯೊಬ್ಬಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಟಿ.ದಾಸರಹಳ್ಳಿಯ ಹಾವನೂರು ಬಡಾವಣೆಯ ಸೌಂದರ್ಯ ಶಾಲೆಯ ವಿದ್ಯಾರ್ಥಿನಿ ರಮ್ಯಮೂರ್ತಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಈ ಹಿಂದೆ ಶಾಲಾ ಆಡಳಿತ ಮಂಡಳಿ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದ ವಿದ್ಯಾರ್ಥಿನಿ ತಾಯಿ ಮೇಲಿನ ಸೇಡಿಗಾಗಿ ರಮ್ಯಾ ಮೂರ್ತಿಗೆ ಶಾಲೆಯಲ್ಲಿ ಕಿರುಕುಳ ನೀಡಲಾಗುತ್ತಿತ್ತು.
ಶಾಲಾ ಆಡಳಿತ ಮಂಡಳಿಯವರ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೂ ಮುನ್ನ Dear school marks is not every thing , I HATE YOU PRINCIPAL ಎಂದು ಡೆತ್ ನೋಟ್ ಬರೆದಿದ್ದು, ಅದರಲ್ಲಿ ಕೆಲವು ವಿದ್ಯಾರ್ಥಿಗಳ ಹೆಸರನ್ನು ಕೂಡ ಉಲ್ಲೇಖಿಸಿಳೆ.
ನಿನ್ನೆ ಶೆಟ್ಟಿಹಳ್ಳಿ ಬಳಿ ರೈಲಿಗೆ ಸಿಲುಕಿ ಸಾವಿಗೆ ರಮ್ಯಮೂರ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಶವಂತಪುರ ರೈಲ್ವೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸಿದ್ದಾರೆ.