ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ 7ನೇ ತರಗತಿ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದಲ್ಲದೆ ಸೆಕ್ಸ್ ವಿಡಿಯೋ ಮಾಡಿ ಶಾಲೆಗೆ ಕಳುಹಿಸಿರುವ ಘಟನೆ ಬೆಳಗಾವಿಯ ಸಮಾದೇವಿ ಗಲ್ಲಿಯಲ್ಲಿ ನಡೆದಿದೆ. ಕಾಮುಕ ಶಿವಕುಮಾರ್ ಬಾಳೇಕುಂದ್ರಿಯನ್ನ ಪೊಲೀಸರು ಬಂಧಿಸಿದ್ದಾರೆ.
7ನೇ ತರಗತಿಯ ವಿದ್ಯಾರ್ಥಿನಿಯನ್ನ ತನ್ನ ಲೈಂಗಿಕ ಕ್ರಿಯೆಗೆ ಬಳಸಿಕೊಂಡಿದ್ದ ಈತ ಲೈಂಗಿಕ ಕ್ರಿಯೆಯ ವಿಡಿಯೋ ಮಾಡಿಕೊಂಡಿದ್ದ. ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲ, ಚಮಚದಿಂದ ಬಾಲಕಿಗೆ ಬರೆ ಹಾಕಿದ್ದಾನೆಂದು ಆರೋಪಿಸಲಾಗಿದೆ. ಈತನ ಕಾಟ ಹೆಚ್ಚಾಗದ ಬಾಲಕಿ ವಿರೋಧ ವ್ಯಕ್ತಪಡಿಸಿದ್ದರಿಂದ ಕಾಮುಕ ಶಿವಕುಮಾರ್ ವಿಡಿಯೋವನ್ನ ಶಾಲೆಗೇ ಕಳುಹಿಸಿದ್ದಾನೆ.
ಬಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿ ಶಿವಕುಮಾರ್, ಬಾಳೇಕುಂದ್ರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಎಂದು ತಿಳಿದುಬಂದಿದೆ.